ಇಸ್ಲಾಮಾಬಾದ್: 14 ವರ್ಷದ ಬಾಲಕಿಯನ್ನು ಬಲೂಚಿಸ್ತಾನ್ ನಿಂದ ಚುನಾಯಿತರಾಗಿದ್ದ ನ್ಯಾಷನಲ್ ಆಸೆಂಬ್ಲಿಯ ಸದಸ್ಯ ಮತ್ತು ಉಲೇಮಾ-ಇ- ಇಸ್ಲಾಂ ಮುಖಂಡ ಮೌಲಾನಾ ಸಲಾಹುದ್ದೀನ್ ಅಯುಬಿ ಪೊಲೀಸರು ವಿಚಾರಣೆಗೆ ಒಳಪಟ್ಟಿದ್ದಾರೆ.
Advertisement
ಬಾಲಕಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದು, ಶಾಲಾ ದಾಖಲಾತಿ ಪ್ರಕಾರ ಜನ್ಮ ದಿನ ಅಕ್ಟೋಬರ್ 28, 2006 ಆಗಿದೆ. ಆಕೆಗೆ ಮದುವೆಯ ವಯಸ್ಸಾಗಿಲ್ಲ ಎಂಬುದನ್ನು ಮಾಧ್ಯಮವೊಂದು ವರದಿ ಮಾಡಿದೆ. ಪಾಕ್ ಮಾಧ್ಯಮಗಳ ಪ್ರಕಾರ ನ್ಯಾಷನಲ್ ಆಸೆಂಬ್ಲಿ ಸದಸ್ಯ ಮೌಲಾನಾ ಸಲಾಹುದ್ದೀನ್ ಅಯುಬಿ ಅವರ ವಯಸ್ಸು 50ಕ್ಕೂ ಹೆಚ್ಚಾಗಿದೆ. ಈತ 14 ವರ್ಷದ ಬಾಲಕಿಯನ್ನು ವಿವಾಹವಾಗಿ ವಿಚಾರಣೆಗೆ ಒಳಪಟ್ಟಿದ್ದಾನೆ.
Advertisement
Advertisement
ಪಾಕಿಸ್ತಾನದ ಕಾನೂನು ಪ್ರಕಾರ 16 ವರ್ಷಕ್ಕಿಂತ ಕೆಳಗಿನ ಬಾಲಕಿಯರ ವಿವಾಹಕ್ಕೆ ಅವಕಾಶ ಇಲ್ಲ. ಬಲವಂತದಿಂದ ಮದುವೆ ಮಾಡುವ ಪೋಷಕರಿಗೆ ಕಾನೂನು ಪ್ರಕಾರ ಶಿಕ್ಷೆ ನೀಡಲಾಗುತ್ತದೆ. ಈ ಮಧ್ಯೆ ಆಕೆಗೆ 16 ವರ್ಷ ವಯಸ್ಸಾಗುವವರೆಗೂ ಮದುವೆ ಮಾಡುವುದಿಲ್ಲ ಎಂದು ಬಾಲಕಿಯ ತಂದೆ ಸಂಬಂಧಿತ ಪ್ರಾಧಿಕಾರಿಗಳಿಗೆ ತಿಳಿಸಿರುವುದಾಗಿ ಚಿತ್ರಾಲ್ ಡಿಪಿಒ ಹೇಳಿದ್ದಾರೆ.
Advertisement
ಸ್ವಯಂ ಸೇವಾ ಸಂಸ್ಥೆಯೊಂದು ಕೆಲವು ದಿನಗಳ ಹಿಂದೆ ದಾಖಲಿಸಿದ್ದ ದೂರಿನ ಅನ್ವಯ ಪೊಲೀಸರು ಬಾಲಕಿ ಮನೆಗೆ ತೆರಳಿ ವಿಚಾರಣೆ ನಡೆಸಿದ್ದಾರೆ. ಆದರೆ, ಆಕೆಯ ತಂದೆ ಮದುವೆ ಆಗಿಲ್ಲ ಎಂದಿದ್ದಾರೆ ಎಂದು ಚಿತ್ರಾಲ್ ಪೊಲೀಸ್ ಠಾಣೆ ಎಸ್ಹೆಚ್ಒ ಇನ್ಸ್ಪೆಕ್ಟರ್ ಸಜ್ಜಾದ್ ಅಹ್ಮದ್ ಹೇಳಿದ್ದಾರೆ.