– 6,300 ಕೋಟಿ ಮೌಲ್ಯದ ಯೋಜನೆಗಳಿಗೆ ಪ್ರಧಾನಿ ಶಂಕುಸ್ಥಾಪನೆ
– ಹೆಣಗಾಡುತ್ತಿದ್ದ ಅಸ್ಸಾಂ ಈಗ ಅಭಿವೃದ್ಧಿಯ ಎಂಜಿನ್; ಮೋದಿ ಬಣ್ಣನೆ
ದಿಸ್ಪುರ್: ಇದು ನನ್ನ ರಿಮೋಟ್ ಕಂಟ್ರೋಲ್, ನನ್ನ ಬಳಿ ಬೇರೆ ಯಾವ್ದೇ ರಿಮೋಟ್ ಕಂಟ್ರೋಲ್ ಇಲ್ಲ. 140 ಕೋಟಿ ದೇಶವಾಸಿಗಳು (Indians) ನನ್ನ ಏಕೈಕ ರಿಮೋಟ್ ಕಂಟ್ರೋಲ್ ಅಂತ ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದರು.
ಅಸ್ಸಾಂನಲ್ಲಿ (Assam) ವಿವಿಧ ಅಭಿವೃದ್ಧಿ ಯೋಜನೆಗಳಿಗೆ (Developmental Projects) ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಬಳಿಕ ವೇದಿಕೆಯಲ್ಲಿ ಮಾತನಾಡಿದ ಮೋದಿ, 140 ಕೋಟಿ ಭಾರತೀಯರು ನನ್ನ ಏಕೈಕ ರಿಮೋಟ್ ಕಂಟ್ರೋಲ್ ಎನ್ನುತ್ತಲೇ ಅಸ್ಸಾಂ ಅಭಿವೃದ್ಧಿಯನ್ನ ಕೊಂಡಾಡಿದರು.
Assam’s healthcare sector is poised for a major upgrade. Speaking at a programme in Darrang. https://t.co/rjfGluOS4s
— Narendra Modi (@narendramodi) September 14, 2025
ವೇಗವಾಗಿ ಬೆಳೆಯುತ್ತಿರುವ ರಾಜ್ಯ
ಪ್ರಸ್ತುತ ವಿಶ್ವದಲ್ಲಿ ಭಾರತ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ, ಅಸ್ಸಾಂ ದೇಶದಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಜ್ಯಗಳಲ್ಲಿ ಒಂದಾಗಿದೆ. ಒಂದು ಕಾಲದಲ್ಲಿ ಹೆಣಗಾಡುತ್ತಿದ್ದ ಅಸ್ಸಾಂ ಈಗ ಗಮನಾರ್ಹ ಬೆಳವಣಿಗೆ ಸಾಧಿಸುತ್ತಿದೆ. 13% ಬೆಳವಣಿಗೆಯ ದರ ಹೊಂದಿದೆ. ಇದು ಅಸ್ಸಾಂ ಜನರ ಕಠಿಣ ಶ್ರಮ ಹಾಗೂ ಬಿಜೆಪಿ ಡಬಲ್ ಎಂಜಿನ್ ಸರ್ಕಾರದ ಫಲಿತಾಂಶವೂ ಆಗಿದೆ ಎಂದು ನುಡಿದರು.
ಮುಂದುವರಿದು. ದಶಕಗಳ ಕಾಲ ಅಸ್ಸಾಂ ಆಳಿದ ಕಾಂಗ್ರೆಸ್ ಪಕ್ಷವು ಬ್ರಹ್ಮಪುತ್ರ ನದಿಗೆ ಕೇವಲ 3 ಸೇತುವೆಗಳನ್ನು ನಿರ್ಮಿಸಿತು, ಆದ್ರೆ ನಾವು ಕಳೆದ 10 ವರ್ಷಗಳಲ್ಲಿ 6 ಸೇತುವೆಗಳನ್ನು ನಿರ್ಮಿಸಿದ್ದೇವೆ ಎಂದು ಹೇಳಿದರು. ಭಾಷಣದ ವೇಲೆ ಆಪರೇಷನ್ ಸಿಂಧೂರದ ಯಶಸ್ಸನ್ನು ಮೋದಿ ಸ್ಮರಿಸಿದರು.
6,300 ಕೋಟಿ ಯೋಜನೆಗಳಿಗೆ ಶಂಕು
ಸೆ.15ರ ವರೆಗೆ ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಸ್ಸಾಂನ ದರ್ರಾಂಗ್ ಜಿಲ್ಲೆಯಲ್ಲಿ 6,300 ಕೋಟಿ ಮೌಲ್ಯದ ಆರೋಗ್ಯ ಮತ್ತು ಮೂಲಸೌಕರ್ಯ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ದರ್ರಾಂಗ್ ವೈದ್ಯಕೀಯ ಕಾಲೇಜು, ಜಿಎನ್‌ಎಂ ಶಾಲೆ, ಬಿಎಸ್‌ಸಿ ನರ್ಸಿಂಗ್ ಕಾಲೇಜು ಹಾಗೂ 1,200 ಕೋಟಿ ಅಂದಾಜು ವೆಚ್ಚದ 2.9 ಕಿಮೀ ಉದ್ದದ ನರೇಂಗಿ-ಕುರುವಾ ಸೇತುವೆಗೆ ಶಂಕುಸ್ಥಾಪನೆ ನೆರವೇರಿಸಿದ್ರು. ಇದೇ ವೇಳೆ ಅಸ್ಸಾಂನ ಕಾಮರೂಪ ಮತ್ತು ದರ್ರಾಂಗ್ ಜಿಲ್ಲೆ ಹಾಗೂ ಮೇಘಾಲಯದ ರಿ ಭೋಯ್ ಸಂಪರ್ಕಿಸುವ 4,530 ಕೋಟಿ ರೂ. ವೆಚ್ಚದ 118.5 ಕಿಮೀ ಉದ್ದದ ಗುವಾಹಟಿ ರಿಂಗ್ ರಸ್ತೆ ಯೋಜನೆಗೂ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಗೋಲಾಘಾಟ್ ಜಿಲ್ಲೆಯ ನುಮಾಲಿಗಢ ಸಂಸ್ಕರಣಾಗಾರದಲ್ಲಿ 5000 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಬಿದಿರು ಆಧಾರಿತ ಎಥೆನಾಲ್ ಸ್ಥಾವರ ಮತ್ತು 7,230 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಪೆಟ್ರೋ ಫ್ಲೂಯಿಡೈಸ್ಡ್ ಕ್ಯಾಟಲಿಟಿಕ್ ಕ್ರ್ಯಾಕರ್ ಘಟಕವನ್ನು ಉದ್ಘಾಟಿಸಲಿದ್ದಾರೆ. ಒಟ್ಟು ಸುಮಾರು 18,000 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ.