ನವದೆಹಲಿ: ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ರಾಗಿಣಿ ದ್ವಿವೇದಿಗೆ 140 ದಿನಗಳ ಬಳಿಕ ಜಾಮೀನು ಸಿಕ್ಕಿದೆ. ಸುದೀರ್ಘ ವಿಚಾರಣೆ ನಡೆಸಿದ ನ್ಯಾ.ರೋಹಿಂಗ್ಟನ್ ನಾರಿಮನ್ ತ್ರೀ ಸದಸ್ಯ ಪೀಠ ಜಾಮೀನು ನೀಡಿ ಆದೇಶಿಸಿದೆ.
ರಾಗಿಣಿ ಕಳೆದ 140 ದಿನಗಳಿಂದ ಜೈಲಿನಲ್ಲಿದ್ದಾರೆ. ಪ್ರಕರಣದಲ್ಲಿ ಯಾವುದೇ ಬೆಳವಣಿಗೆಗಳಿಲ್ಲ. ರಾಗಿಣಿ ಮನೆಯಲ್ಲಿ ಯಾವುದೇ ಡ್ರಗ್ ವಶಪಡಿಸಿಕೊಂಡಿಲ್ಲ ಮತ್ತು ಸೇವಿಸಿಲ್ಲ. ಕೇವಲ ಆರೋಪಿ ರವಿಶಂಕರ್ ಹೇಳಿಕೆಯನ್ನಾಧರಿಸಿ ರಾಗಿಣಿಯವರನ್ನ ಬಂಧಿಸಲಾಗಿದೆ. ಈಗಾಗಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರಿಗೆ ಜಾಮೀನು ಸಿಕ್ಕಿದೆ. ಹಾಗಾಗಿ ಜಾಮೀನು ನೀಡಬೇಕೆಂದು ರಾಗಿಣಿ ಪರ ವಕೀಲ ಸಿದಾರ್ಥ ಲೂಥ್ರಾ ವಾದ ಮಂಡಿಸಿದ್ದರು.
Advertisement
Advertisement
ಡ್ರಗ್ ಪತ್ತೆಹಚ್ಚಲು ಲ್ಯಾಬ್ ಫಲಿತಾಂಶಗಳನ್ನು ಹಾಳುಮಾಡುವ ಪ್ರಯತ್ನದಲ್ಲಿ ದ್ವಿವೇದಿ ನೀರನ್ನು ಮೂತ್ರದ ಮಾದರಿಯೊಂದಿಗೆ ಬದಲಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ಈ ರೀತಿಯ ಯಾವುದೇ ಬೆಳವಣಿಗೆ ಆಗಿಲ್ಲ. ಪ್ರಕರಣ ಇತರೆ ಆರೋಪಿಗಳಿಗೆ ಜಾಮೀನು ಸಿಕ್ಕಿದೆ ಎಂಬ ಅಂಶಗಳು ಲೂಥ್ರಾ ನ್ಯಾಯಲಯದ ಗಮನಕ್ಕೆ ತಂದಿದ್ದರು.
Advertisement
Advertisement
ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020ರ ಸೆಪ್ಟೆಂಬರ್ 4ರಂದು ರಾಗಿಣಿ ದ್ವಿವೇದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ನಟಿ ಸಂಜನಾ ಗಲ್ರಾನಿ ಜಾಮೀನಿನ ಮೇಲೆ ಹೊರ ಬಂದಿದ್ದಾರೆ.