Bengaluru CityCoronaDistrictsKarnatakaLatestLeading NewsMain Post
ಜನವರಿ 31ರ ವರೆಗೆ ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ 31ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ನಗರದಲ್ಲಿ ಸೆಕ್ಷನ್ 144 ಸೆಕ್ಷನ್ ವಿಸ್ತರಣೆ ಮಾಡಿ ಇಂದು ಸಂಜೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಜನವರಿ 31 ರವರೆಗೆ 144 ಸೆಕ್ಷನ್ ವಿಸ್ತರಣೆ ಮಾಡಿದ್ದಾರೆ. ರಾತ್ರಿ ಅಷ್ಟೇ ಅಲ್ಲ ಡೇ ಟೈಂನಲ್ಲಿಯೂ ನಗರದಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. 144 ಸೆಕ್ಷನ್ ವೇಳೆ ಯಾವುದೇ ರ್ಯಾಲಿ, ಪ್ರತಿಭಟನೆ, ಸಭೆ ಹಾಗೂ ಸಮಾರಂಭಗಳಿಗೆ ಅವಕಾಶ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ನಡುವೆ ಮದ್ಯ ಪಾರ್ಸೆಲ್‌ಗೆ ಅವಕಾಶ ಕೊಡಿ – ಬೊಮ್ಮಾಯಿಗೆ ಮನವಿ
ಇಷ್ಟು ಮಾತ್ರವಲ್ಲದೆ ಐದು ಜನಕ್ಕಿಂತ ಹೆಚ್ಚು ಮಂದಿ ಗುಂಪು ಕೂಡದಂತೆ ಆದೇಶದಲ್ಲಿ ಉಲ್ಲೇಖಿಸಿದ್ದಾರೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದರೆ ಎನ್ ಡಿಎಂಎ ಆಕ್ಟ್ ಅಡಿ ಕಾನೂನು ಕ್ರಮ ಜರಗಿಸಲಾಗುವುದು ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಪೊಲೀಸ್ ಆಯುಕ್ತ ಕಮಲ್ ಪಂತ್‍ಗೆ ಕೊರೊನಾ ಪಾಸಿಟಿವ್