ಮಂಗಳೂರು,ಬೆಂಗಳೂರು: ಇಂದು ಹೊಸ ಸರ್ಕಾರ ವಿಶ್ವಾಸ ಮತಯಾಚನೆ ಹಿನ್ನೆಲೆಯಲ್ಲಿ ಮಂಗಳೂರು ಮತ್ತು ಬೆಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಮಂಗಳೂರು ನಗರದಾದ್ಯಂತ ನಿಷೇಧಾಜ್ಞೆ ಜಾರಿಯಾಗಿದ್ದು, ರಾಜಕೀಯ ಹಾಗೂ ಕೋಮು ಗಲಭೆಗಳಾಗುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿ ಇಂದು ಬೆಳಗ್ಗೆ 6 ಗಂಟೆಯಿಂದ ಭಾನುವಾರ ಬೆಳಗ್ಗೆ 10ರ ತನಕ ನಿಷೇಧಾಜ್ಞೆ ಜಾರಿಯಾಗಿದೆ.
Advertisement
Advertisement
ರಾಜ್ಯ ರಾಜಕಾರಣದಲ್ಲಿ ಕ್ಷಣ ಕ್ಷಣಕ್ಕೂ ಬೆಳವಣಿಗೆಗಳಾಗುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ 144 ಸೆಕ್ಷನ್ ಅನ್ವಯಿಸಲಾಗಿದೆ. ಇದನ್ನೂ ಓದಿ: ಸಿಎಂ ಯಡಿಯೂರಪ್ಪಗೆ ಇಂದು ಬಿಗ್ ಡೇ- ವಿಶ್ವಾಸಮತ ಯಾಚನೆ ಅಗ್ನಿಪರೀಕ್ಷೆಲಿ ವಿನ್ ಆಗ್ತಾರಾ ಬಿಎಸ್‍ವೈ?
Advertisement
ಇನ್ನು ಬೆಂಗಳೂರಲ್ಲೂ ಕೂಡ ನಿಷೇಧಾಜ್ಞೆ ಜಾರಿಗೊಳಿಸಿದ್ದು, ವಿಧಾನಸೌಧ ಸುತ್ತಮುತ್ತ ಕೈ ಅಲರ್ಟ್ ಘೋಷಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸುನೀಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.