ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಪಾಸಿಟಿವ್ ಕೇಸ್ಗಳ ಸಂಖ್ಯೆ 1,400ರ ಗಡಿದಾಟಿದ್ದು, ಇಂದು ಒಟ್ಟು 1,478 ಪಾಸಿಟಿವ್ ಪ್ರಕರಣ ವರದಿಯಾಗಿದೆ.
Advertisement
ನಿನ್ನೆ ರಾಜ್ಯದ ಒಟ್ಟು ಪ್ರಕರಣಗಳ ಸಂಖ್ಯೆ 1,151 ಇತ್ತು. ಇಂದು 327 ಕೇಸ್ ಹೆಚ್ಚಳಗೊಂಡು 1,478ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಪಾಸಿಟಿವಿಟಿ ರೇಟ್ 4.56ಕ್ಕೆ ಜಿಗಿದಿದೆ. ಇದನ್ನೂ ಓದಿ: ಟೋಲ್ಗೇಟ್ಗೆ ಡಿಕ್ಕಿಯಾಗಿ ಪಲ್ಟಿಯಾದ ಅಂಬುಲೆನ್ಸ್- ಮೂವರು ಸಾವು, ಓರ್ವ ಗಂಭೀರ
Advertisement
ಬೆಂಗಳೂರು ನಗರದಲ್ಲೂ ಪ್ರಕರಣಗಳ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದೆ. ಇಂದು ಒಟ್ಟು 1,251 ಪ್ರಕರಣ ಪತ್ತೆಯಾಗುವ ಮೂಲಕ ನಿನ್ನೆಗಿಂತ 238 ಕೇಸ್ ಏರಿಕೆಯಾಗಿದೆ. ನಗರದಲ್ಲಿ 1,088 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 7,064ಕ್ಕೆ ತಲುಪಿದೆ. ಬೆಂಗಳೂರು ನಗರದ ಬಳಿಕ ಬೆಂಗಳೂರು ನಗರದಲ್ಲಿ ದಾಖಲಾದ 32 ಕೇಸ್ ಜಿಲ್ಲೆಯೊಂದರ ಹೆಚ್ಚಿನ ಕೇಸ್ ಆಗಿದೆ. ಈವರೆಗೆ ಒಟ್ಟು 40,089 ಮಂದಿ ಕೊರೊನಾಗೆ ಮೃತಪಟ್ಟಿದ್ದಾರೆ. ಇಂದು ರಾಜ್ಯದಲ್ಲಿ 1,229 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
Advertisement
Advertisement
ಈ ಮೂಲಕ ಸಕ್ರಿಯ ಪ್ರಕರಣಗಳ ಸಂಖ್ಯೆ 7,866ಕ್ಕೆ ತಲುಪಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,90,057 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,42,060 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 3,01,233 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 32,363 ಸ್ಯಾಂಪಲ್ (ಆರ್ಟಿಪಿಸಿಆರ್ 24,251 + 8,112 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ಈ ಪ್ರಕರಣದಿಂದ ಮುಕ್ತನಾಗಿ ಬರುತ್ತೇನೆ ಎಂದು ಮೊದಲೇ ಗೊತ್ತಿತ್ತು: ಪತ್ನಿ, ಪುತ್ರನಿಗೆ ಸಿಹಿ ತಿನ್ನಿಸಿ ಈಶ್ವರಪ್ಪ ಸಂಭ್ರಮ
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬಾಗಲಕೋಟೆ 15, ಬಳ್ಳಾರಿ 12, ಬೆಳಗಾವಿ 15, ಬೆಂಗಳೂರು ಗ್ರಾಮಾಂತರ 32, ಬೆಂಗಳೂರು ನಗರ 1,251, ಬೀದರ್ 4, ಚಾಮರಾಜನಗರ 7, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 8, ಚಿತ್ರದುರ್ಗ 1, ದಕ್ಷಿಣ ಕನ್ನಡ 8, ದಾವಣಗೆರೆ 2, ಧಾರವಾಡ 18, ಗದಗ 0, ಹಾಸನ 8, ಹಾವೇರಿ 0, ಕಲಬುರಗಿ 8, ಕೊಡಗು 2, ಕೋಲಾರ 13, ಕೊಪ್ಪಳ 2, ಮಂಡ್ಯ 6, ಮೈಸೂರು 24, ರಾಯಚೂರು 1, ರಾಮನಗರ 2, ಶಿವಮೊಗ್ಗ 6, ತುಮಕೂರು 9, ಉಡುಪಿ 8, ಉತ್ತರ ಕನ್ನಡ 10, ವಿಜಯಪುರ 6 ಮತ್ತು ಯಾದಗಿರಿಯಲ್ಲಿ 1 ಪಾಸಿಟಿವ್ ಪ್ರಕರಣ ದಾಖಲಾಗಿದೆ.