15 ದಿನಗಳ ನಂತರ ಮತ್ತೆ ಲಾಕ್‍ಡೌನ್ ಮಾಡಬೇಕಾಗುತ್ತೆ,ಜನರೇ ಎಚ್ಚರ: ಬಿಎಸ್‍ವೈ

Public TV
1 Min Read
BS YEDIYURAPPA

ಚಿಕ್ಕಬಳ್ಳಾಪುರ: ಅನ್‍ಲಾಕ್ ಆಗಿದೆ ಎಂದು ಜನರೇ ಮೈ ಮರೆಯಬೇಡಿ. ಸದಾ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಂಡು ವ್ಯವಹರಿಸಿ. ಸರ್ಕಾರದ ಜೊತೆ ಸಹಕರಿಸಿ. ಇಲ್ಲವಾದರೆ ಮತ್ತೆ 15 ದಿನಗಳ ನಂತರ ಈ ಹಿಂದಿನ ಲಾಕ್‍ಡೌನ್ ಪರಿಸ್ಥಿತಿ ಜಾರಿ ಮಾಡಬೇಕಾಗುತ್ತದೆ ಎಂದು ರಾಜ್ಯದ ಜನರಿಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಎಚ್ಚರಿಕೆ ಸಂದೇಶ ನೀಡಿದ್ದಾರೆ.

GLB HOSPITAL medium

ದೊಡ್ಡಬಳ್ಳಾಪುರ ನಗರದಲ್ಲಿ ಮೇಕ್ ಶಿಫ್ಟ್ ಆಸ್ಪತ್ರೆ ಲೋಕಾರ್ಪಣೆ ಮಾಡಿದ ಬಳಿಕ ಮಾತನಾಡಿದ ಯಡಿಯೂರಪ್ಪನವರು, ಕೊರೊನಾ ಮೂರನೇ ಅಲೆ ಎದುರಿಸಲು ದೇಶದಲ್ಲಿ ಮೊಟ್ಟ ಮೊದಲ 70 ಹಾಸಿಗೆಗಳ ಮೇಕ್ ಶಿಫ್ಟ್ ಆಸ್ಪತ್ರೆಯನ್ನು ಉದ್ಘಾಟನೆ ಮಾಡಿದ್ದೇವೆ. ಭಾರತದ ಆರು ರಾಜ್ಯದಲ್ಲಿ ಮಾತ್ರವೇ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಆಗುತ್ತಿದೆ. ದೇಶದಲ್ಲಿ ಮೊದಲು ನಮ್ಮ ರಾಜ್ಯದಲ್ಲಿ ಈ ಮೇಕ್ ಶಿಫ್ಟ್ ಆಸ್ಪತ್ರೆ ನಿರ್ಮಾಣ ಆಗಿದೆ. ಈ ಆಸ್ಪತ್ರೆ ನಿರ್ಮಾಣಕ್ಕೆ ಸಹಕಾರ ನೀಡಿದ ಖಾಸಗಿ ಸಂಸ್ಥೆಗಳಿಗೆ ಸರ್ಕಾರದಿಂದ ಧನ್ಯವಾದ ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ಕೇಂದ್ರ ಸಂಪುಟ ಸೇರಿದ ಸಂಸದರಾದ ನಾರಾಯಣಸ್ವಾಮಿ, ಶೋಭಾ ಕರಂದ್ಲಾಜೆ

GLB HOSPITAL 1 medium

ಈ ಆಸ್ಪತ್ರೆ ಕೋವಿಡ್-19 ನಂತರವೂ ಸಾರ್ವಜನಿಕರ ಸೇವೆಗೆ ಲಭ್ಯವಾಗಲಿದೆ. ಕೊರೊನಾ ಕಂಟ್ರೋಲ್‍ಗೆ ಸರ್ಕಾರ ಆನೇಕ ಕಾರ್ಯಕ್ರಮಗಳನ್ನು ಕೈಗೊಂಡಿದೆ. ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸುವ ವಿಶ್ವಾಸ ನನಗಿದೆ. ಆದರೆ ನಾನು ಸಾರ್ವಜನಿಕರಲ್ಲಿ ಒಂದು ಮನವಿ ಮಾಡುತ್ತೇನೆ. ಜನರೇ ಲಾಕ್‍ಡೌನ್ ಸಡಿಲಿಕೆ ಆಗಿದೆ ಎಂದು ಬೇಕಾಬಿಟ್ಟಿ ಒಡಾಡಬೇಡಿ. ವ್ಯಾಪಾರ ವಹಿವಾಟು ಮಾಡುವಾಗ ಎಚ್ಚರವಹಿಸಿ ಎಂದು ಮನವಿ ಮಾಡಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *