ಬೆಂಗಳೂರು: ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರು ಫುಲ್ ಅಲರ್ಟ್ ಆಗಿದ್ದಾರೆ. ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್ ಸ್ಥಾಪಿಸಿ ಅಕ್ರಮ ವಸ್ತುಗಳ ಸಾಗಾಟ ತಡೆಗೆ ಕ್ರಮ ವಹಿಸಿದ್ದಾರೆ. ಈ ವೇಳೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 15.78 ಕೋಟಿ ರೂ. ನಗದು, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನ ಜಪ್ತಿ ಮಾಡಲಾಗಿದೆ.
ರಾಜ್ಯದಲ್ಲಿ ಈವರೆಗೆ 15.78 ಕೋಟಿ ರೂ. ನಗದು, 23 ಕೋಟಿ ರೂ. ಮೌಲ್ಯದ ಮದ್ಯ, 65 ಲಕ್ಷ ರೂ. ಮೌಲ್ಯದ ಡ್ರಗ್ಸ್, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿಯಾಗಿದೆ. ಇದನ್ನೂ ಓದಿ: Exclusive: ಕ್ಷೇತ್ರದ ಜನರ ನಾಡಿಮಿಡಿತ ನನಗೆ ಗೊತ್ತು.. ಡಾ.ಮಂಜುನಾಥ್ ಮಿಡಿತ ಬೇಕಾಗಿಲ್ಲ: ಡಿ.ಕೆ.ಸುರೇಶ್
Advertisement
Advertisement
ಯಾವ ಜಿಲ್ಲೆಯಲ್ಲಿ ಎಷ್ಟು ಹಣ ಜಪ್ತಿ?
ಧಾರವಾಡ: ನಗರದ ಹೊರವಲಯದ ಹಳಿಯಾಳ್ ಚೆಕಪೋಸ್ಟ್‌ನಲ್ಲಿ ದಾಖಲೆ ಇಲ್ಲದೇ ಸಾಗಿಸುತಿದ್ದ 1.49 ಲಕ್ಷ ರೂ. ನಗದು ಹಣವನ್ನು ಜಪ್ತಿ ಮಾಡಲಾಗಿದೆ. ಈ ಹಣವನ್ನು ಹುಬ್ಬಳ್ಳಿಯಿಂದ ಅಳ್ನಾವರ ಪಟ್ಟಣಕ್ಕೆ ಸಾಗಿಸಲಾಗುತ್ತಿತ್ತು. ಮೊಹ್ಮದ್ ಶಮಶುದ್ದೀನ್ ಎಂಬವರ ಕಾರಿನಲ್ಲಿ ಹಣವನ್ನು ವಶಕ್ಕೆ ಪಡೆದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement
Advertisement
ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜಿ ಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆಯಿಲ್ಲದೇ ಸದಾಗಿಸುತ್ತಿದ್ದ ಬರೋಬ್ಬರಿ 1.44 ಕೋಟಿ ರೂ. ನಗದು ಹಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ತುಮಕೂರಿನಿಂದ ಚಿತ್ರದುರ್ಗಕ್ಕೆ ತೆರಳುತ್ತಿದ್ದ ಮಾರ್ಗಮಧ್ಯೆ ಖಾಸಗಿ ಎಟಿಎಂ ಏಜೆನ್ಸಿ ವಾಹನದಲ್ಲಿದ್ದ ಹಣವನ್ನು ಜಪ್ತಿ ಮಾಡಲಾಗಿದೆ. ಸ್ಥಳಕ್ಕೆ ಹಿರಿಯೂರು ತಹಶಿಲ್ದಾರ್ ರಾಜೇಶ್ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: Bengaluru Central Lok Sabha 2024: ಹ್ಯಾಟ್ರಿಕ್ ಗೆಲುವಿನ ಸರದಾರನಿಗೆ ಬ್ರೇಕ್ ಹಾಕುತ್ತಾ ಕಾಂಗ್ರೆಸ್?
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಪಾಲಾರ್ ಚೆಕ್‌ಪೋಸ್ಟ್ ಬಳಿ ದಾಖಲೆಯಿಲ್ಲದೇ ಸಾಗಿಸುತ್ತುದ್ದ 2.70 ಲಕ್ಷ ರೂ.ಗಳಷ್ಟು ನಗದು ಹಣವನ್ನು ಸೀಜ್ ಮಾಡಲಾಗಿದೆ. ಶಿವಮೂರ್ತಿ ಎಂಬುವರ ಬಳಿಯಿದ್ದ ಬ್ಯಾಗ್‌ನಲ್ಲಿ ಹಣ ಪತ್ತೆಯಾಗಿತ್ತು. ಚೆಕ್‌ಪೋಸ್ಟ್ ಅಧಿಕಾರಿಗಳು ವಿಚಾರಣೆ ನಡೆಸಿದಾಗ ಸ್ಪಷ್ಟ ಉತ್ತರ, ದಾಖಲೆಗಳು ಸಿಗದ ಹಿನ್ನೆಲೆಯಲ್ಲಿ ಹಣವನ್ನು ಜಪ್ತಿ ಮಾಡಲಾಯಿತು.