ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮೊಮ್ಮಗಳು ಡಾ. ಸೌಂದರ್ಯ ಇಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದೀಗ ಈಕೆ 15 ದಿನಗಳ ಹಿಂದೆಯಷ್ಟೇ ತನ್ನ ಹಳೆಯ ಸ್ನೇಹಿತರನ್ನು ಮಾತನಾಡಿಸಿಕೊಂಡು ಬಂದಿದ್ದರು ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
Advertisement
ಹೌದು 15 ದಿನದ ಹಿಂದೆ ಸೌಂದರ್ಯ ಅವರು ತಮ್ಮ ಜೊತೆಗೆ ಈ ಹಿಂದೆ ತಾನು ಓದಿದ್ದ ಕಾಲೇಜಿಗೆ ಭೇಟಿ ಕೊಟ್ಟು ಸ್ನೇಹಿತರನ್ನು ಮಾತಾನಾಡಿಸಿಕೊಂಡು ಬಂದಿದ್ದರು. ಮದುವೆ ಬಳಿಕ ಸೌಂದರ್ಯ ಅವರು ತಲೆನೋವು ಹಾಗೂ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿದ್ದರು. ಈ ಸಂಬಂಧ ಶಿವಮೊಗ್ಗ ಹಾಗೂ ಬೆಂಗಳೂರಿನ ಪ್ರಮುಖ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೂಡ ಪಡೆದಿದ್ದರು.
Advertisement
Advertisement
ಸದ್ಯ ಸೌಂದರ್ಯ ಅವರಿಗೆ 9 ತಿಂಗಳ ಗಂಡು ಮಗುವಿದ್ದು, ಮಗುವಾದ ಬಳಿಕ ಹಳೆ ಸ್ನೇಹಿತರನ್ನು ಭೇಟಿಯಾಗಿ ಮಾತನಾಡಿಸಿಕೊಂಡು ಬಂದಿದ್ದರು. ಆದರೆ ಇದೀಗ ಅವರು ಆತ್ಮಹತ್ಯೆಗೆ ಶರಣಾಗಿದ್ದು, ಸ್ನೇಹಿತರು ಕೂಡ ಕಣ್ಣೀರಾಕುತ್ತಿದ್ದಾರೆ. ಇದನ್ನೂ ಓದಿ: ಮೋದಿ, ದೇವೇಗೌಡ, ಸೇರಿ ಗಣ್ಯರಿಂದ ಬಿಎಸ್ವೈ ಮೊಮ್ಮಗಳ ಸಾವಿಗೆ ಸಂತಾಪ
Advertisement
ಬಿಎಸ್ವೈ ಮೊಮ್ಮಗಳು ಸೌಂದರ್ಯ ಅವರು ರಾಮಯ್ಯ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ಅವರ ಪತಿ ಡಾ. ನಿರಂಜನ್ ಕೂಡ ಅದೇ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿದ್ದರು. ರಾಮಯ್ಯದಲ್ಲಿ ವೈದ್ಯಕೀಯ ಶಿಕ್ಷಣ ಮುಗಿಸಿ ಬೌರಿಂಗ್ನಲ್ಲೇ ಸರ್ಜನ್ ಆಗಿದ್ದ ಸೌಂದರ್ಯ ಅವರು ಮಗುವಾದ ನಂತರ ಕೆಲಸ ಬಿಟ್ಟಿದ್ದರು. ಇದನ್ನೂ ಓದಿ: ದಂಪತಿ ನಡುವೆ ಯಾವತ್ತೂ ಜಗಳವಾಗಿಲ್ಲ- ಬಿಲ್ಡಿಂಗ್ ಕನ್ಸ್ಟ್ರಕ್ಟರ್ ಖ್ವಾಜಾ ಹುಸೇನ್
ಸೌಂದರ್ಯ ಹಾಗೂ ಪತಿ ಡಾ. ನಿರಂಜನ್ ಅವರು ಧವಳಗಿರಿ ಅಪಾರ್ಟ್ ಮೆಂಟ್ನಲ್ಲಿ ವಾಸವಾಗಿದ್ದರು. ಆದರೆ ಇಂದು ಡಾಲರ್ಸ್ ಕಾಲೋನಿಯ ಲೆಗೆಸ್ಸಿ ಅಪಾರ್ಟ್ ಮೆಂಟ್ ಫ್ಲಾಟ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಗುವನ್ನು ಪಕ್ಕದ ರೂಮ್ನಲ್ಲಿ ಮಲಗಿಸಿ ತಾನು ಬೇರೊಂದು ರೂಮ್ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಮಗುವಾದ ಬಳಿಕ ಡಿಪ್ರೆಷನ್ಗೆ ಒಳಗಾಗಿದ್ರಾ ಬಿಎಸ್ವೈ ಮೊಮ್ಮಗಳು?