– ಪರಪ್ಪನ ಅಗ್ರಹಾರ ಜೈಲಿಗೆ ‘ಮಾಣಿಕ್ಯ’ ನಟಿ
ಬೆಂಗಳೂರು: ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ನಟಿ ರನ್ಯಾ ರಾವ್‌ಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಮಾ.24 ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಇದರಿಂದ ರನ್ಯಾಗೆ ಜೈಲು ಫಿಕ್ಸ್ ಆಗಿದ್ದು, ಪರಪ್ಪನ ಅಗ್ರಹಾರ ಸೇರಲಿದ್ದಾರೆ.
ನಟಿ ರನ್ಯಾ ರಾವ್ ಮೂರು ದಿನಗಳ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಡಿಆರ್‌ಐ ಅಧಿಕಾರಿಗಳು ಆರೋಪಿಯನ್ನು ಕೋರ್ಟ್ಗೆ ಹಾಜರುಪಡಿಸಿದ್ದರು.
ದುಬೈನಿಂದ ಚಿನ್ನ ಕಳ್ಳ ಸಾಗಣೆ ಮಾಡುವ ವೇಳೆ ಈಚೆಗೆ ಬೆಂಗಳೂರು ಏರ್ಪೋರ್ಟ್ನಲ್ಲಿ ನಟಿ ರನ್ಯಾಳನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದರು.