ಬೀಜಿಂಗ್: ಚೀನಾದಲ್ಲಿ (China) ಭಾರೀ ಮಳೆ (Rain) ಸುರಿಯುತ್ತಿದ್ದು, ಧಾರಾಕಾರ ಮಳೆಯ ಪರಿಣಾಮ 15 ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಸೋಮವಾರ ಬೆಳಗ್ಗೆ 7 ಗಂಟೆಯಿಂದ ನೈರುತ್ಯ ಚೀನಾದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಗೆ 15 ಜನ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಈ ಕುರಿತು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ (Xi Jinping), ಎಲ್ಲಾ ಹಂತಗಳ ಅಧಿಕಾರಿಗಳು ಜನರ ಸುರಕ್ಷತೆ ಮತ್ತು ಆಸ್ತಿಯನ್ನು ಖಾತ್ರಿಪಡಿಸಿಕೊಳ್ಳಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಆದೇಶಿಸಿದ್ದಾರೆ. ಅಲ್ಲದೇ ಪ್ರಮುಖ ಅಧಿಕಾರಿಗಳು ಪ್ರವಾಹದ ವಿರುದ್ಧ ಹೋರಾಡುವಲ್ಲಿ ಮುಂದಾಳತ್ವ ವಹಿಸಬೇಕು. ನಷ್ಟಗಳನ್ನು ಕಡಿಮೆಗೊಳಿಸುವಲ್ಲಿ ಶ್ರಮಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತೀಯ-ಅಮೆರಿಕನ್ ಸಂಸದೆ ಚುಡಾಯಿಸಿದ ವ್ಯಕ್ತಿಗೆ 364 ದಿನಗಳ ಜೈಲು ಶಿಕ್ಷೆ
ನೆರೆಯ ಸಿಚುವಾನ್‌ನಲ್ಲಿ (Sichuan) ಈ ತಿಂಗಳು ಭಾರೀ ಮಳೆಯಿಂದ 4,60,000ಕ್ಕೂ ಹೆಚ್ಚು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ವರದಿಗಳು ತಿಳಿಸಿವೆ. ಭೀಕರ ಮಳೆಯ ಪರಿಣಾಮ ಸುಮಾರು 85,000 ಜನರನ್ನು ತಮ್ಮ ಮನೆಗಳಿಂದ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಅಲ್ಲದೇ ಈ ವಾರ ಮಳೆಯಿಂದಾಗಿ ಪರ್ವತ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಶ್ವೇತಭವನದಲ್ಲಿ ಕೊಕೇನ್ ಪತ್ತೆ – ತೀವ್ರ ತನಿಖೆ
Web Stories