ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನಲ್ಲಿ ಸುಮಾರು 15 ಅಡಿ ಉದ್ದದ ಕಾಳಿಂಗ ಸರ್ಪವವೊಂದನ್ನು ಸೆರೆ ಹಿಡಿಯಲಾಗಿದೆ.
ವಿರಾಜಪೇಟೆ ತಾಲೂಕಿನ ಬಿ.ಶೆಟ್ಟಿಗೇರಿ ಗ್ರಾಮದ ನಾಮೇರ ಬೋಸು ಎಂಬವರ ಮನೆಯ ಬಳಿ ಕಾಳಿಂಗ ಸರ್ಪ ಕಾಣಿಸಿಕೊಂಡಿತ್ತು. ಇದನ್ನು ಕಂಡು ಗಾಬರಿಗೊಂಡ ನಾಮೇರ ಅವರ ಕುಟುಂಬಸ್ಥರು ಹಾಗೂ ಸ್ಥಳೀಯರು ಉರಗ ತಜ್ಞ ಅಲೆಮಾಡ ನವೀನ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ಬಂದ ನವೀನ್ ಅವರನ್ನು ಕಾಳಿಂಗ ಸರ್ಪವನ್ನು ಹಿಡಿದು, ಸುರಕ್ಷಿತವಾಗಿ ಅರಣ್ಯ ಪ್ರದೇಶದಲ್ಲಿ ಬಿಟ್ಟಿದ್ದಾರೆ. ಇದನ್ನೂ ಓದಿ: 1 ಗಂಟೆ ಕಾರ್ಯಚರಣೆ ನಡೆಸಿ 14 ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ
Advertisement
Advertisement
ಅರಣ್ಯ ಪ್ರದೇಶಕ್ಕೆ ಬಿಡುವುದಕ್ಕೂ ಮುನ್ನ ಗ್ರಾಮದ ಮೈದಾನದಲ್ಲಿ ಕೆಲ ಹೊತ್ತು ಕಾಳಿಂಗ ಸರ್ಪವನ್ನು ನೋಡಲು ಜನರಿಗೆ ಅವಕಾಶ ಮಾಡಿಕೊಟ್ಟಿದ್ದರು. ಈ ವೇಳೆ 15 ಅಡಿ ಉದ್ದ ಕಾಳಿಂಗ ಸರ್ಪವನ್ನು ಜನರು ಆತಂಕ ಹಾಗೂ ಅಚ್ಚರಿಯಿಂದ ವೀಕ್ಷಿಸಿದರು. ಹಾವನ್ನು ಸೆರೆ ಹಿಡಿದಿದ್ದರಿಂದ ಬಿ.ಶೆಟ್ಟಿಗೇರಿ ಗ್ರಾಮಸ್ಥರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಶೌಚಾಲಯದಲ್ಲಿ ಕಾಳಿಂಗ ಸರ್ಪ: ಕಕ್ಕಾಬಿಕ್ಕಿಯಾದ ಮನೆ ಮಾಲೀಕ