– ಗಾಜಾದಲ್ಲಿ ಹಮಾಸ್ ಮುಖ್ಯಸ್ಥನ ರೈಡ್‌ಹ್ಯಾಂಡ್ ಸೇರಿ ಮೂವರ ಹತ್ಯೆ
ಬೈರೂತ್: ದಕ್ಷಿಣ ಲೆಬನಾನ್ ಮೇಲೆ ನಡೆಸಿದ ವಾಯು ದಾಳಿಯಲ್ಲಿ (IDF Airstrike) ಹಿಜ್ಜುಲ್ಲಾ (Hezbollah) ಸಂಘಟನೆಯ 15 ಮಂದಿಯನ್ನು ಹತ್ಯೆ ಮಾಡಲಾಗಿದೆ. ಇರಾನ್ ಬೆಂಬಲಿತ ಹಿಜ್ಜುಲ್ಲಾ ಸಂಘಟನೆಯನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ ಎಂದು ಇಸ್ರೇಲ್ ಸೇನೆ ಹೇಳಿದೆ.
ಬೈರೂತ್ ಮೇಲೆ ಬಾಂಬ್ ದಾಳಿ:
ಮತ್ತೊಂದುಕಡೆ ಲೆಬನಾನ್ ರಾಜಧಾನಿ ಹಾಗೂ ಅತಿ ದೊಡ್ಡ ನಗರ ಬೈರೂತ್ ಮೇಲೆ ʻಎನಿಮಿʼ ಜೆಟ್ ಮೂಲಕ ಇಸ್ರೇಲ್ ಬಾಂಬ್ ದಾಳಿ ನಡೆಸಿದ್ದು ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು, ಹಲವು ಕಟ್ಟಡಗಳು ಧ್ವಂಸಗೊಂಡಿವೆ.
ಲೆಬನಾನ್‌ನ (Lebanon) ರಾಜಧಾನಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ. ಹಮಾಸ್ ಮತ್ತು ಹಿಬ್ಬುಲ್ಲಾ ಸಂಘಟನೆಗಳನ್ನು ಗುರಿಯಾಗಿಸಿ ಇಸ್ರೇಲ್ ಕ್ಷಿಪಣಿ ದಾಳಿ ಮುಂದುವರಿಸಿದೆ. ಇಸ್ರೇಲ್ ಮೇಲೆ ಇರಾನ್ ಕ್ಷಿಪಣಿ ದಾಳಿಗೆ ಪ್ರತೀಕಾರ ತೀರಿಸುವುದಾಗಿ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಹೇಳಿದ್ದಾರೆ. ಆದರೆ ಇಸ್ರೇಲ್ ದಾಳಿ ನಡೆಸಿದರೆ ಇದಕ್ಕಿಂತಲೂ ದೊಡ್ಡ ಮಟ್ಟದಲ್ಲಿ ಪ್ರತಿದಾಳಿ ನಡೆಸುವುದಾಗಿ ಇಸ್ರೇಲ್ ಎಚ್ಚರಿಸಿದೆ.
Approximately 3 months ago, in a joint IDF and ISA strike in Gaza, the following terrorists were eliminated:
????Rawhi Mushtaha, the Head of the Hamas government in Gaza
????Sameh al-Siraj, who held the security portfolio on Hamas’ political bureau and Hamas’ Labor Committee
????Sami… pic.twitter.com/6xpH6tOOot
— Israel Defense Forces (@IDF) October 3, 2024
ಗಾಜಾದಲ್ಲಿ ಹಮಾಸ್ ಮುಖ್ಯಸ್ಥನ ರೈಟ್‌ಹ್ಯಾಂಡ್ ಹತ್ಯೆ:
ಇಸ್ರೇಲ್-ಇರಾನ್ ನಡುವಿನ ಯುದ್ಧದ ತೀವ್ರತೆ ಹೆಚ್ಚಾಗುತ್ತಿರುವ ಹೊತ್ತಿನಲ್ಲಿ ಇಸ್ರೇಲ್ ಮತ್ತೊಂದು ಸ್ಫೋಟಕ ಹೇಳಿಕೆ ನೀಡಿದೆ. ಮೂರು ತಿಂಗಳ ಹಿಂದೆ ಗಾಜಾದ ಮೇಲೆ ನಡೆಸಿದ ವಾಯುದಾಳಿಯಲ್ಲಿ ಹಮಾಸ್ ಮುಖ್ಯಸ್ಥನ ರೈಟ್‌ಹ್ಯಾಂಡ್ ರಾವ್ಹಿ ಮುಶ್ತಾಹಾ ಇತರ ಇಬ್ಬರು ಲೀಡರ್‌ಗಳನ್ನ ಹತ್ಯೆಗೈದಿರುವುದಾಗಿ ಘೋಷಿಸಿದೆ.