ಕೊಲಂಬೊ: ಅಕ್ರಮ ಮೀನುಗಾರಿಕೆ ಆರೋಪದ ಮೇಲೆ ಶ್ರೀಲಂಕಾದ ನೌಕಾಪಡೆಯು (Sri Lanka Navy) ಕನಿಷ್ಠ 15 ಭಾರತೀಯ ಮೀನುಗಾರರನ್ನು (Indian Fishermen) ಬಂಧಿಸಿದೆ. ಜೊತೆಗೆ ಮೀನುಗಾರರ 2 ಬೋಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.
ಮನ್ನಾರ್ ದ್ವೀಪದ ವಾಯುವ್ಯ ಕರಾವಳಿಯಲ್ಲಿರುವ ವಸಾಹತು ಪ್ರದೇಶವಾದ ತಲೈಮನ್ನಾರ್‌ನಲ್ಲಿ ಶನಿವಾರ ಮೀನುಗಾರರನ್ನು ಬಂಧಿಸಲಾಗಿದೆ ಎಂದು ನೌಕಾಪಡೆ ಹೇಳಿಕೆಯಲ್ಲಿ ತಿಳಿಸಿದೆ. ತಲೈಮನ್ನಾರ್‌ನಲ್ಲಿ ನೌಕಾಪಡೆಯ ವಶದಲ್ಲಿರುವ ಮೀನುಗಾರರನ್ನು ಮೀನುಗಾರಿಕೆ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಖಾನ್ ಹತ್ಯೆಗೆ ಸಂಚು ಮಾಡಿರುವುದು ಸಾಬೀತಾದರೆ ಒಂದು ನಿಮಿಷವೂ ಪ್ರಧಾನಿಯಾಗಿರಲ್ಲ: ಶೆಹಬಾಜ್ ಷರೀಫ್
Advertisement
Advertisement
ಉಭಯ ದೇಶಗಳ ನಡುವೆ ಹಲವು ಉನ್ನತ ಮಟ್ಟದ ಮಾತುಕತೆಗಳು ನಡೆದಿದ್ದರೂ ಭಾರತೀಯ ಮೀನುಗಾರರು ಶ್ರೀಲಂಕಾದ ಸಮುದ್ರದಲ್ಲಿ ಅಕ್ರಮ ಮೀನುಗಾರಿಕೆ ಪುನರಾವರ್ತಿತ ಸಮಸ್ಯೆಯಾಗಿದೆ ಎಂದು ಶ್ರೀಲಂಕಾ ಆರೋಪಿಸಿತ್ತು. ಶ್ರೀಲಂಕಾ ನೇವಲ್ ಕ್ರಾಫ್ಟ್‌ನಲ್ಲಿ ಎರಡೂ ರಾಷ್ಟ್ರಗಳ ನಡುವೆ ಅಂತರರಾಷ್ಟ್ರೀಯ ಸಮುದ್ರ ಗಡಿ ಸವಾಲುಗಳ ಕುರಿತು ಮಾತುಕತೆ ನಡೆಸುತ್ತಿವೆ. ಇದೇ ಸಂದರ್ಭದಲ್ಲಿ ಭಾರತೀಯ ಮೀನುಗಾರರ ಬಂಧನವಾಗಿದೆ.
Advertisement
ಭಾರತ ಮತ್ತು ಶ್ರೀಲಂಕಾ ನಡುವಿನ ಬಾಂಧವ್ಯದಲ್ಲಿ ಮೀನುಗಾರರ ಸಮಸ್ಯೆ ವಿವಾದಾಸ್ಪದವಾಗಿದೆ. ಲಂಕಾ ನೌಕಾಪಡೆಯ ಸಿಬ್ಬಂದಿ ಪಾಕ್ ಜಲಸಂಧಿಯಲ್ಲಿ ಭಾರತೀಯ ಮೀನುಗಾರರ ಮೇಲೆ ಗುಂಡು ಹಾರಿಸಿದ್ದಾರೆ. ಶ್ರೀಲಂಕಾದ ಪ್ರಾದೇಶಿಕ ಜಲವನ್ನು ಅಕ್ರಮವಾಗಿ ಪ್ರವೇಶಿಸಿದ ಹಲವಾರು ಘಟನೆಗಳಲ್ಲಿ ಅವರ ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ. ಇದನ್ನೂ ಓದಿ: ಅತ್ಯಾಚಾರ ಆರೋಪ – ಲಂಕಾ ಕ್ರಿಕೆಟಿಗ ದನುಷ್ಕಾ ಗುಣತಿಲಕ ಸಿಡ್ನಿಯಲ್ಲಿ ಬಂಧನ
Advertisement
ಅಂತಾರಾಷ್ಟ್ರೀಯ ಕಡಲ ಗಡಿ ರೇಖೆಯನ್ನು ದಾಟಿ ಶ್ರೀಲಂಕಾದ ನೀರಿನಲ್ಲಿ ಮೀನುಗಾರಿಕೆ ನಡೆಸುತ್ತಿರುವ ಆರೋಪದ ಮೇಲೆ ಭಾರತೀಯ ಮೀನುಗಾರರನ್ನು ಶ್ರೀಲಂಕಾ ಅಧಿಕಾರಿಗಳು ಬಂಧಿಸುವ ಘಟನೆಗಳು ಸಾಮಾನ್ಯವಾಗಿ ನಡೆಯುತ್ತಿರುತ್ತವೆ.