ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮದುವೆ – ಖತರ್ನಾಕ್‌ ಕಿಲಾಡಿ ಅರೆಸ್ಟ್‌

Public TV
1 Min Read
Love Marriage

ಮೈಸೂರು: ವಿಧವೆಯರು, ಅವಿವಾಹಿತರಿಗೆ ಆನ್‌ಲೈನ್‌ನಲ್ಲಿ (Online Matrimony) ಗಾಳ ಹಾಕಿ ಒಂದಲ್ಲ, ಎರಡಲ್ಲ ಬರೋಬ್ಬರಿ 15 ಮಹಿಳೆಯರ ಜೊತೆ ಮದುವೆಯಾಗಿ, ಹಣ ಚಿನ್ನಾಭರಣ ಕದ್ದು ಪರಾರಿಯಾಗುತ್ತಿದ್ದ ಖತರ್ನಾಕ್ ಕಿಲಾಡಿಯನ್ನ ಮೈಸೂರಿನ ಕುವೆಂಪುನಗರ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಬನಶಂಕರಿ ಬಡಾವಣೆ ನಿವಾಸಿ ಮಹೇಶ್ (35) ಬಂಧಿತ ಆರೋಪಿ. ಬಂಧಿತನಿಂದ 2 ಲಕ್ಷ ನಗದು, 2 ಕಾರ್, ಒಂದು ಬ್ರೇಸ್‌ಲೈಟ್‌, ಒಂದು ಉಂಗುರ, 2 ಚಿನ್ನದ ಬಳೆ, ಒಂದು ನೆಕ್ಲೆಸ್ ಹಾಗೂ 7 ಮೊಬೈಲ್‌ಗಳನ್ನ ವಶ ಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಅಶ್ಲೀಲ ವೀಡಿಯೋ ಕಳಿಸಿ ಪಾಕಿಸ್ತಾನಿ ಏಜೆಂಟ್‌ನನ್ನ ಫ್ರೆಂಡ್‌ ಮಾಡ್ಕೊಂಡಿದ್ದ DRDO ವಿಜ್ಞಾನಿ!

Mysuru Police

ಮಹೇಶ್‌ ಸಿಕ್ಕಿಬಿದ್ದದ್ದು ಹೇಗೆ?
ಆರೋಪಿ ಮಹೇಶ್‌ ಮೈಸೂರಿನ ನಿವಾಸಿ ಹೇಮಲತಾ ಎಂಬವರಿಗೆ ತಾನು ಡಾಕ್ಟರ್ ಎಂದು ಹೇಳಿಕೊಂಡು ಮೋಸ ಮಾಡಿದ್ದ. ಆನ್‌ಲೈನ್‌ ಮ್ಯಾಟ್ರೋಮೊನಿ ವೇದಿಕೆಯಲ್ಲಿ ಪರಿಚಯಿಸಿಕೊಂಡು ನಂಬಿಸಿ ವಿಶಾಖಪಟ್ಟಣದಲ್ಲಿ ಮದುವೆ ಮಾಡಿಕೊಂಡಿದ್ದ. ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಡೆಯುತ್ತಿದ್ದ ವೇಳೆ ಮತಪೆಟ್ಟಿಗೆಯನ್ನೇ ಹೊತ್ತೊಯ್ದ ಯುವಕ

Love Marriage 2

ಕ್ಲಿನಿಕ್ ತೆರೆಯಬೇಕೆಂದು 70 ಲಕ್ಷ ಸಾಲ ಕೊಡಿಸುವಂತೆ ಮಹೇಶ್ ಹೇಮಲತಗೆ ಒತ್ತಾಯ ಹೇರಿದ್ದ, ಸಾಲ ಕೊಡಿಸಲು ಹೇಮಲತಾ ಹಿಂದೇಟು ಹಾಕಿದ್ದಾಗ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ 15 ಲಕ್ಷ ಹಣ ಹಾಗೂ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಈ ಬಗ್ಗೆ ಹೇಮಲತಾ ಮೈಸೂರಿನ ಕುವೆಂಪುನಗರ ಪೊಲೀಸರಿಗೆ ದೂರು ನೀಡಿದ್ದರು.

ದೂರು ದಾಖಲಿಸಿಕೊಂಡ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಆರೋಪಿ ಮಹೇಶ್ ಹೆಡೆಮುರಿ ಕಟ್ಟಿ ವಿಚಾರಣೆಗೆ ಒಳಪಡಿಸಿದ್ದಾಗ ತಾನು ಡಾಕ್ಟರ್, ಇಂಜಿನಿಯರ್, ಸಿವಿಲ್ ಕಂಟ್ರಾಕ್ಟರ್ ಎಂದು ಹೇಳಿಕೊಂಡು ಮೋಸ ಮಾಡಿರೋದು ಬೆಳಕಿಗೆ ಬಂದಿದೆ. ಈವರೆಗೆ ಸುಮಾರು 15 ಮಹಿಳೆಯರಿಗೆ ದೋಖಾ ಮಾಡಿರುವುದು ತನಿಖೆ ವೇಳೆ ಬಯಲಾಗಿದೆ.

Web Stories

Share This Article