ಮಂಗಳೂರು: ಎಳನಿರು ಕುಡಿದು ಸುಮಾರು 15 ಮಂದಿ ಸಾರ್ವಜನಿಕರು ಅಸ್ವಸ್ಥಗೊಂಡ ಘಟನೆ ಮಂಗಳೂರು ನಗರ ಹೊರವಲಯದ ಅಡ್ಯಾರ್ ಬಳಿ ನಡೆದಿದೆ.
ಅಡ್ಯಾರ್‍ನಲ್ಲಿರುವ ಎಳನೀರು (Tender Coconut) ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ಪರಿಸರದ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ.
Advertisement
Advertisement
ಸದ್ಯ ಅಸ್ವಸ್ಥಗೊಂಡ ಮೂವರಿಗೆ ಮಂಗಳೂರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಉಳಿದ 12 ಮಂದಿ ಹೊರರೋಗಿಗಳಾಗಿ ಔಷಧಿ ಪಡೆದಿದ್ದಾರೆ. ಘಟನೆ ಬಳಿಕ ಆಸ್ಪತ್ರೆ ಹಾಗೂ ಫ್ಯಾಕ್ಟರಿಗೆ ಆರೋಗ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement
Advertisement
ಎಳನೀರಿನ ಸ್ಯಾಂಪಲ್ ಸಂಗ್ರಹಿಸಿ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ. ಅಲ್ಲದೇ ಜನ ಆತಂಕಕ್ಕೆ ಒಳಗಾಗದಂತೆ ಆರೋಗ್ಯಾಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ಗುಡ್‍ನ್ಯೂಸ್- ನಾಳೆ, ನಾಡಿದ್ದು ಬೆಂಗಳೂರಲ್ಲಿ ಮಳೆ ಸಾಧ್ಯತೆ