ಬೆಂಗಳೂರು: ಏಕಾಏಕಿ 15ಕ್ಕೂ ಹೆಚ್ಚು ನಾಯಿಗಳ ಹಿಂಡು ವಿದ್ಯಾರ್ಥಿನಿ ಮೇಲೆ ದಾಳಿ ಮಾಡಿರುವ ಘಟನೆ ರಾಮಮೂರ್ತಿ ನಗರದ ಸಮೀಪವಿರುವ ಹೊಯ್ಸಳ ನಗರದಲ್ಲಿ ನಡೆದಿದೆ.
ಮೇಘನಾ ಬೀದಿನಾಯಿಗಳ ದಾಳಿಗೆ ಒಳಗಾದ ವಿದ್ಯಾರ್ಥಿನಿ. ಅದೃಷ್ಟವಶಾತ್ ವಿದ್ಯಾರ್ಥಿನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಬಾದಾಮಿ ಅಗಸ್ತ್ಯ ಹೊಂಡದಲ್ಲಿ ಈಜಲು ಹೋದ ಯುವಕ ನಾಪತ್ತೆ
ಬೀದಿನಾಯಿಗಳ ದಾಳಿಗೆ ವಿದ್ಯಾರ್ಥಿನಿ ಭಯಗೊಂಡಿದ್ದಾರೆ. ಕೂಡಲೇ ವಿದ್ಯಾರ್ಥಿನಿಯನ್ನು ಸ್ಥಳೀಯರು ಕೆಆರ್ ಪುರಂ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.

