ನವದೆಹಲಿ: ಭಾರತದಲ್ಲಿ ಕೋವಿಡ್ ರೂಪಾಂತರಿ ಓಮಿಕ್ರಾನ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನವರಿ 3 ರಿಂದ 15ರಿಂದ 18 ವರ್ಷದ ಮಕ್ಕಳಿಗೂ ಕೋವಿಡ್ ಲಸಿಕೆಯನ್ನು ನೀಡುವುದಾಗಿ ಸರ್ಕಾರ ಯೋಜಿಸಿದೆ. ಇದಕ್ಕಾಗಿ ಕೋವಿನ್ ಪೋರ್ಟಲ್‌ನಲ್ಲಿ ಜನವರಿ 1ರಿಂದ ನೋಂದಾಯಿಸಿಕೊಳ್ಳಬಹುದು ಎಂದು ಕೋವಿನ್ ಪ್ಲಾಟ್‌ಫಾರ್ಮ್ ಮುಖ್ಯಸ್ಥ ಡಾ. ಆರ್‌ಎಸ್ ಶರ್ಮಾ ತಿಳಿಸಿದ್ದಾರೆ.
ಜನವರಿ 1ರಿಂದ ಕೋವಿನ್‌ನಲ್ಲಿ 15 ವರ್ಷ ಮೇಲ್ಪಟ್ಟ ಮಕ್ಕಳು ನೋಂದಾಯಿಸಿಕೊಳ್ಳಲು ಸಾಧ್ಯವಾಗಲಿದೆ. ಕೆಲವು ವಿದ್ಯಾರ್ಥಿಗಳಲ್ಲಿ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳು ಇಲ್ಲದಿರುವುದರಿಂದ ಲಸಿಕೆಗೆ 10ನೇ ತರಗತಿಯ ಐಡಿ ಕಾರ್ಡ್ ಅಗತ್ಯ ಬೀಳಲಿದೆ. ಇದನ್ನೂ ಓದಿ: ಸಿಎಂ ಕಾರ್ಯಕ್ರಮಕ್ಕೆ ಇಲ್ಲ ಕೊರೊನಾ ರೂಲ್ಸ್ – ಬಸ್‍ಗಳಲ್ಲಿ ಜನರನ್ನು ತುಂಬಿಸಿಕೊಂಡು ಬಂದ ಸರ್ಕಾರ
Advertisement
Advertisement
15ರಿಂದ 18 ವರ್ಷ ವಯಸ್ಸಿನವರಿಗೆ 2022ರ ಜನವರಿ 3ರಂದು ಲಸಿಕೆಗಳನ್ನು ನೀಡಲು ಪ್ರಾರಂಭಿಸಲಾಗುವುದು ಎಂದು ಪ್ರಧಾನಿ ಮೋದಿಯವರು ಶನಿವಾರ ಘೋಷಿಸಿದ್ದರು. 60 ವರ್ಷ ಮೇಲ್ಪಟ್ಟವರು ಜನವರಿ 10ರಿಂದ ವೈದ್ಯರ ಶಿಫಾರಸಿನ ಮೇರೆಗೆ ಬೂಸ್ಟರ್ ಡೋಸ್ ಕೂಡಾ ಪಡೆಯಬಹುದು ಎಂದು ಹೇಳಿದ್ದರು.
Advertisement
ದೇಶದಲ್ಲಿ 18 ವರ್ಷ ಮೇಲ್ಪಟ್ಟ ಜನಸಂಖ್ಯೆಯಲ್ಲಿ 61% ಜನರು ಎರಡು ಡೋಸ್ ಪಡೆದಿದ್ದಾರೆ ಹಾಗೂ 90% ಜನರು 1 ಡೋಸ್ ಪಡೆದಿದ್ದಾರೆ ಎಂದು ಪ್ರಧಾನಿ ತಿಳಿಸಿದ್ದರು. ಇದನ್ನೂ ಓದಿ: ಓಮಿಕ್ರಾನ್ ವೈರಸ್‍ಗೆ ಬೆಚ್ಚಿಬಿದ್ದ ಜನ – ಡಿಸೆಂಬರ್‌ನಲ್ಲಿ ಹೆಚ್ಚು ವ್ಯಾಕ್ಸಿನೇಷನ್