CrimeLatestMain PostNational

ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ

ಮುಂಬೈ: 9 ವರ್ಷದ ಬಾಲಕಿಯ (Girl) ಮೇಲೆ 15 ವರ್ಷದ ಬಾಲಕನೊಬ್ಬ (Boy) ಅತ್ಯಾಚಾರ (Rape) ನಡೆಸಿ, ಕೊಲೆಗೈದಿರುವ (Murder) ಆಘಾತಕಾರಿ ಘಟನೆ ಮಹಾರಾಷ್ಟ್ರದ (Maharashtra) ಕಲ್ಯಾಣ್‌ನಲ್ಲಿ (Kalyan) ನಡೆದಿದೆ. ಮೃತ ಬಾಲಕಿಯ ತಂದೆಯ ಮೇಲಿನ ಸೇಡಿಗೆ ಅಪ್ರಾಪ್ತ ಆರೋಪಿ ಈ ಕೃತ್ಯ ನಡೆಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಗುರುವಾರ ಮುಂಜಾನೆ ಕಲ್ಯಾಣ್ ರೈಲ್ವೇ ನಿಲ್ದಾಣದ ಬಳಿಯ ಕಲ್ಯಾಣಿ ಪಶ್ಚಿಮ ಪ್ರದೇಶದ ವಸತಿ ಪ್ರದೇಶದ ಆವರಣದಲ್ಲಿ 9 ವರ್ಷದ ಬಾಲಕಿಯ ಶವ ಪತ್ತೆಯಾಗಿತ್ತು. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ.

ಸೇಡು ತೀರಿಸಿಕೊಳ್ಳಲು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ 15ರ ಬಾಲಕ

ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಅಪ್ರಾಪ್ತ ಆರೋಪಿಯನ್ನು ಪೊಲೀಸರು ಗುರುತಿಸಿದ್ದಾರೆ. ಬಾಲಕನ ಬಗ್ಗೆ ಸ್ಥಳೀಯರಲ್ಲಿ ವಿಚಾರಣೆ ಮಾಡಲಾಗಿದ್ದು, ಬಳಿಕ ಆತನನ್ನು ಪೊಲೀಸರು ವಶಕ್ಕೆ ಪಡೆದು ಮಹಾತ್ಮ ಫುಲೆ ಪೊಲೀಸ್ ಠಾಣೆಗೆ ಕರೆತಂದಿದ್ದಾರೆ. ಇದನ್ನೂ ಓದಿ: ನನಗೆ ಸರ್ವಿಸ್‌ ಕೊಡ್ತೀರಾ, ದಿನಕ್ಕೆ 50 ಸಾವಿರ ರೂ. ಕೊಡ್ತೀನಿ – ಲೆಟರ್ ಬರೆದು ಮಹಿಳೆಗೆ ಲೈಂಗಿಕ ಕಿರುಕುಳ

ವಿಚಾರಣೆ ವೇಳೆ ಅಪ್ರಾಪ್ತ ಆರೋಪಿ ನಡೆದ ಘಟನೆಯನ್ನು ತಿಳಿಸಿದ್ದಾನೆ. 2 ದಿನಗಳ ಹಿಂದೆ ಆತ ಬಾಲಕಿಯ ತಂದೆಯೊಂದಿಗೆ ಜಗಳವಾಡಿದ್ದು, ಹಲ್ಲೆಗೆ ಒಳಗಾಗಿದ್ದ. ಇದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಬಾಲಕ ಆತನ ಅಪ್ರಾಪ್ತ ಮಗಳನ್ನು ಅಪಹರಿಸಿ, ಅತ್ಯಾಚಾರ ನಡೆಸಿ ಬ್ಲೇಡ್‌ನಿಂದ ಕತ್ತು ಸೀಳಿರುವುದಾಗಿ ತಿಳಿಸಿದ್ದಾನೆ.

STOP RAPE

ಪೊಲೀಸರು ಲೈಂಗಿಕ ಅಪರಾಧಗಳಿಗೆ ಮಕ್ಕಳ ಸಂರಕ್ಷಣಾ ಕಾಯ್ದೆಯಡಿ (POCSO)ಪ್ರಕರಣ ದಾಖಲಿಸಿಕೊಂಡಿದ್ದು, ಬಾಲಕನನ್ನು ವೀಕ್ಷಣಾಲಯಕ್ಕೆ ಕಳುಹಿಸಿದ್ದಾರೆ. ಘಟನೆಯ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮೂರು ಮಕ್ಕಳಿಗೆ ವಿಷ ಹಾಕಿ ಮಹಿಳೆ ನೇಣಿಗೆ ಶರಣು

Live Tv

Leave a Reply

Your email address will not be published. Required fields are marked *

Back to top button