ಚಾಮರಾಜನಗರ: ಬಂಡೀಪುರ (Bandipura) ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯದ ಬೂದಿಕಟ್ಟೆ ಅರಣ್ಯ ಪ್ರದೇಶದಲ್ಲಿ ಸುಮಾರು 15 ವರ್ಷ ವಯಸ್ಸಿನ ಗಂಡಾನೆಯೊಂದು ಮೃತಪಟ್ಟಿದೆ.
ಅರಣ್ಯ ಸಿಬ್ಬಂದಿ ಗಸ್ತಿನ ವೇಳೆ ಆನೆಯ ಶವ ಪತ್ತೆಯಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪಶುವೈದ್ಯರು ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಹೊಟ್ಟೆನೋವಿನಿಂದ ಆನೆ ಮೃತಪಟ್ಟಿರಬಹುದು ಎಂದು ಶಂಕಿಸಿದ್ದಾರೆ. ಇದನ್ನೂ ಓದಿ: ಆಸ್ತಿ ವಿವಾದ | ಬೆಂಗಳೂರಿನ ಕುಟುಂಬದ ಮನೆಗೆ ಭೇಟಿ ನೀಡದಂತೆ ಶರ್ಮಿಳಾಗೆ ತಡೆ; ಭಾರೀ ಹೈಡ್ರಾಮಾ
ಈವರೆಗೂ ಆನೆಯ ಸಾವಿಗೆ ಕಾರಣ ತಿಳಿದುಬಂದಿಲ್ಲ. ಸದ್ಯ ನಿಖರ ಕಾರಣ ತಿಳಿಯಲು ಅಗತ್ಯ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
