ನವದೆಹಲಿ: 15 ವರ್ಷದ ವಿದ್ಯಾರ್ಥಿನಿಯೊಬ್ಬಳು ಅವಧಿಗೂ ಮುನ್ನವೇ ಶಾಲೆಯ ಶೌಚಾಲಯದಲ್ಲೇ ಮಗುವಿಗೆ ಜನ್ಮ ನೀಡಿದ ಘಟನೆಯೊಂದು ದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಮಗುವಿಗೆ ಜನ್ಮ ನೀಡಿದ ಬಾಲಕಿ ದೆಹಲಿಯ ಮುಖರ್ಜಿ ನಗರದಲ್ಲಿರೋ ಸರ್ಕಾರಿ ಶಾಲೆಯಲ್ಲಿ 10ನೇ ತರಗತಿ ಓದುತ್ತಿದ್ದಾಳೆ. ಸದ್ಯ ಪ್ರಕರಣ ಸಂಬಂಧ ಆರೋಪಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.
Advertisement
ಏನಿದು ಪ್ರಕರಣ?: ಗುರುವಾರ ವಿದ್ಯಾರ್ಥಿನಿಗೆ ಶಾಲೆಯಲ್ಲಿ ಪರೀಕ್ಷೆ ಇತ್ತು. ಪರೀಕ್ಷೆ ಬರೆಯುತ್ತಿದ್ದ ವೇಳೆ ಆಕೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಹೀಗಾಗಿ ಶೌಚಾಲಯಕ್ಕೆ ತೆರಳಿದ್ದಾಳೆ. ಈ ವೇಳೆ ವಿದ್ಯಾರ್ಥಿನಿ ಬಾತ್ ರೂಮ್ ನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ. ಕೂಡಲೇ ಆಕೆಯನ್ನು ಶಾಲಾ ಅಧಿಕಾರಿಗಳು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
Advertisement
ಘಟನೆಯ ಸಂಬಂಧ ಪೊಲೀಸರು ವಿದ್ಯಾರ್ಥಿನಿಯನ್ನು ವಿಚಾರಿಸಿದಾಗ, ನೆರೆಮನೆಯ ಆಟೋ ಚಾಲಕನೊಬ್ಬ ಒಂದು ವರ್ಷದಿಂದ 5 ಬಾರಿ ಅತ್ಯಾಚಾರವೆಸಗಿದ್ದಾನೆ ಎಂಬ ಸತ್ಯ ಹೊರಬಿದ್ದಿದೆ. ನೆರೆಮನೆಯ 51 ವರ್ಷದ ವ್ಯಕ್ತಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದು ಅಲ್ಲದೇ ಈ ವಿಷಯವನ್ನು ಯಾರಿಗೂ ತಿಳಿಸಿದಂತೆ ಒತ್ತಡ ಹೇರಿ ಆಕೆಗೆ ಹಣವನ್ನು ಕೊಡುತ್ತಿದ್ದ ಎಂಬುವುದಾಗಿ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.
Advertisement
ಬಾಲಕಿಯ ಮಾಹಿತಿಯಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈತ ಮೂಲತಃ ಬಿಹಾರದವನಾಗಿದ್ದು, ದೆಹಲಿಯಲ್ಲಿ ಆಟೋ ರಿಕ್ಷಾ ಓಡಿಸುತ್ತಿದ್ದಾನೆ ಅಂತ ಪೊಲೀಸರು ತಿಳಿಸಿದ್ದಾರೆ. ವಿಚಾರಣೆಯ ವೇಳೆ ವಿದ್ಯಾರ್ಥಿನಿ ಗರ್ಭಿಣಿಯಾಗಿರೋ ವಿಚಾರ ತಿಳಿದು ಆಕೆಗೆ ಗರ್ಭಪಾತವಾಗಲು ಮಾತ್ರೆಯನ್ನು ನೀಡಿದ್ದೆ ಎನ್ನುವ ವಿಚಾರವನ್ನು ಪೊಲೀಸ್ ವಿಚಾರಣೆಯಲ್ಲಿ ಬಾಯ್ಬಿಟ್ಟಿದ್ದಾನೆ.
Advertisement
ವಿದ್ಯಾರ್ಥಿನಿಗೆ ತಾನು ಗರ್ಭಿಣಿಯಾಗಿರೋ ವಿಚಾರ ತಿಳಿದಿರಲಿಲ್ಲ. ಹೀಗಾಗಿ ಆಕೆಯ ಪೋಷಕರು ಈ ಬಗ್ಗೆ ಯೋಚನೆ ಮಾಡಿರಲಿಲ್ಲ. ಮಗಳು ಆವಾಗವಾಗ ಹೊಟ್ಟೆ ನೋವು ಅಂತ ಹೇಳುತ್ತಿದ್ದಳು. ಆಸಿಡಿಟಿಯಿಂದಾಗಿ ಹೀಗೆ ಆಗುತ್ತಿರಬಹುದುದೆಂದು ವಿದ್ಯಾರ್ಥಿನಿ ಪೋಷಕರು ನಿರ್ಲಕ್ಷ್ಯ ತೋರಿದ್ದರು. ಇದೀಗ ಬಾಲಕಿ ಆರೂವರೆ ತಿಂಗಳಿಗೆ ಮಗುವಿಗೆ ಜನ್ಮ ನೀಡಿದ್ದು, ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ ಎಂದು ಇದೇ ವೇಳೆ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.