ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 15 ವರ್ಷ ಪೂರೈಸಿದ ಹಿಟ್‌ಮ್ಯಾನ್ – ಭಾವುಕ ಪತ್ರ ಬರೆದ ರೋಹಿತ್ ಶರ್ಮಾ

Public TV
1 Min Read
rohith sharma

ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಶಸ್ವಿಯಾಗಿ 15 ವರ್ಷಗಳನ್ನು ಪೂರೈಸಿದ ಖುಷಿಯಲ್ಲಿರುವ ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಮ್ಮ ಸಂತಸವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದಾರೆ.

2007ರಲ್ಲಿ ಇದೇ ದಿನ (ಜೂನ್ 23), ರೋಹಿತ್ ಶರ್ಮಾ ಐರ್ಲೆಂಡ್ ವಿರುದ್ಧ ಏಕದಿನ ಚೊಚ್ಚಲ ಪಂದ್ಯವನ್ನು ಆಡಿರುವುದಾಗಿ ನೆನಪಿಸಿಕೊಂಡಿದ್ದಾರೆ. ಈ ಪಂದ್ಯದಲ್ಲಿ ಭಾರತ ಒಂಬತ್ತು ವಿಕೆಟ್‌ಗಳಿಂದ ಗೆದ್ದಿತ್ತು ಎಂಬುದನ್ನೂ ಅವರು ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ಕ್ರಿಸ್ಟಿಯಾನೊ ರೊನಾಲ್ಡೊ ಮಾಲೀಕತ್ವದ 13 ಕೋಟಿ ಮೌಲ್ಯದ ಕಾರು ಅಪಘಾತ 

ROHITH SHARMA

ಈ ಕುರಿತಾಗಿ ಟ್ವೀಟ್ ಮಾಡಿರುವ ರೋಹಿತ್, ಎಲ್ಲರಿಗೂ ನಮಸ್ಕಾರ. ನನ್ನ ನೆಚ್ಚಿನ ಜೆರ್ಸಿಯಲ್ಲಿ 15 ವರ್ಷಗಳು ಕಳೆದಿದ್ದೇನೆ. ಅಂತಾರಾಷ್ಟ್ರೀಯ ಕ್ರಿಕೆಟ್ ಜಗತ್ತಿನಲ್ಲಿ ನಾನು ಭಾರತಕ್ಕೆ ಪ್ರವೇಶಿಸಿ ಇಂದಿಗೆ 15 ವರ್ಷಗಳನ್ನು ಪೂರೈಸಿದ್ದೇನೆ. ಇದೊಂದು ಅದ್ಭುತ ಪ್ರಯಾಣವಾಗಿದೆ. ಖಂಡಿತವಾಗಿ ನಾನು ನನ್ನ ಜೀವನದುದ್ದಕ್ಕೂ ಕಾಪಾಡಿಕೊಳ್ಳುತ್ತೇನೆ ಎಂದು ರೋಹಿತ್ ಭಾವುಕರಾಗಿದ್ದಾರೆ.

ಈ ಪ್ರಯಾಣದ ಭಾಗವಾಗಿರುವ ಎಲ್ಲರಿಗೂ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಮತ್ತು ನಾನು ಉತ್ತಮ ಆಟಗಾರನಾಗಿ ಇಲ್ಲಿಯವರೆಗೆ ಪ್ರಯಾಣಿಸಲು ನನಗೆ ಸಹಾಯ ಮಾಡಿದ ಜನರಿಗೆ ವಿಶೇಷ ಧನ್ಯವಾದಗಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಿನ್ನದ ಹುಡುಗ ನೀರಜ್ ಚೋಪ್ರಾ ಕೊರಳಿಗೆ ಮತ್ತೊಂದು ಚಿನ್ನ 

ಮುಂದಿನ ತಿಂಗಳ ಜುಲೈ 1 ರಿಂದ 5ರ ವರೆಗೆ ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಟೆಸ್ಟ್ ಪಂದ್ಯವನ್ನಾಡಲಿದೆ. ಅದಕ್ಕೂ ಮುನ್ನ ಲಿಸೆಸ್ಟರ್‌ ವಿರುದ್ಧ ಅಭ್ಯಾಸ ಪಂದ್ಯವನ್ನಾಡಲಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *