ಕಾರವಾರ: ಗಾಂಜಾ ಮಾರಾಟ ಹಾಗೂ ಸೇವನೆ ಆರೋಪದಲ್ಲಿ ಶಿರಸಿಯ ವಿವಿಧ ಬಡಾವಣೆಯಿಂದ 15 ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಡಿವೈಎಸ್ ಪಿ ರವಿ ಡಿ.ನಾಯ್ಕ, ಸಿಪಿಐ ರಾಮಚಂದ್ರ ನಾಯಕ ಅವರ ಮಾರ್ಗದರ್ಶನದಲ್ಲಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯ ಪಿಎಸ್‌ಐ ಭೀಮಾಶಂಕರ್ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ 15 ಯುವಕರನ್ನು ವಶಕ್ಕೆ ಪಡೆಯಲಾಗಿದೆ. ಇದನ್ನೂ ಓದಿ: ಬಿಜೆಪಿ ಏನು ಮಳೆ ನಿಲ್ಲಿಸೋಕೆ ಆಗುತ್ತಾ – ಈಶ್ವರಪ್ಪ ಬೇಜವಾಬ್ದಾರಿ ಹೇಳಿಕೆ
ಶಿರಸಿ ನಗರದ ಕಸ್ತೂರಬಾ ನಗರ, ನೆಹರೂ ನಗರ ಸೇರಿದಂತೆ ವಿವಿಧೆಡೆಯಿಂದ ಯುವಕರನ್ನು ಗಾಂಜಾ ಸೇವನೆ ಹಾಗೂ ಮಾರಾಟದ ಆರೋಪದ ಮೇರೆಗೆ ವಶಕ್ಕೆ ಪಡೆದು, ಮುಂದಿನ ಕಾನೂನು ಪ್ರಕ್ರಿಯೆಗಾಗಿ ವೈದ್ಯಕೀಯ ಪರೀಕ್ಷೆಗೆ ಉಡುಪಿಯ ಮಣಿಪಾಲ ಆಸ್ಪತ್ರೆಗೆ ಕಳುಹಿಸಿಕೊಡಲಾಗಿದೆ. ವೈದ್ಯಕೀಯ ವರದಿ ಬಂದ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: 6 ತಿಂಗಳ ಬಳಿಕ ಮಗನನ್ನು ಪರಿಚಯಿಸಿದ ಶ್ರೇಯಾ ಘೋಷಾಲ್