– ಜಿಲ್ಲೆಯಲ್ಲಿ ಬಾಲಮುರುಕ ಅಧಿಕಾರಿಗಳಿದ್ದಾರೆ
ಹಾಸನ: 150 ವರ್ಷ ಇತಿಹಾಸವಿರೋ ಕಾಂಗ್ರೆಸ್ ಪಕ್ಷ ಕೋಮುವಾದಿ ಬಿಜೆಪಿ ಜೊತೆ ಸೇರಿದೆ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಡ್ಯ ಮತ್ತು ತುಮಕೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದರು. ಕುಮಾರಸ್ವಾಮಿ ಮಗನಿಗೆ ಮಂಡ್ಯದಲ್ಲಿ ಜೆಡಿಎಸ್ ಮತಗಳು ಸರಿಯಾಗಿ ಬಂದಿದೆ. 150 ವರ್ಷ ಇತಿಹಾಸ ಇರುವ ಪಕ್ಷ ಕಾಂಗ್ರೆಸ್ ಪಕ್ಷ ಕೋಮುವಾದಿಗಳ ಜೊತೆ ಸೇರಿದೆ ಎಂದು ಹೇಳಿದರು.
Advertisement
Advertisement
ರಾಜ್ಯದ ಎಲ್ಲೆಡೆ ಬೆಳಗ್ಗೆಯಿಂದ ಸಂಜೆವರೆಗೆ ಮಾತ್ರ ಸರ್ಕಾರಿ ಕಚೇರಿ ತೆರೆದಿರುತ್ತದೆ. ಹಾಸನದ ಜಿಲ್ಲಾಧಿಕಾರಿ ಕಚೇರಿ ಮಧ್ಯರಾತ್ರಿವರೆಗೂ ತೆರೆದಿರುತ್ತದೆ. 24*7 ಮಾದರಿಯಲ್ಲಿ ಹಾಸನ ಜಿಲ್ಲಾಧಿಕಾರಿ ಕಚೇರಿ ತೆರೆದಿರುತ್ತದೆ. ಬಿಜೆಪಿ ಪಕ್ಷದ ಮುಖಂಡರ ಅಧೀನದಲ್ಲಿ ಜಿಲ್ಲೆಯ ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆಂದು ಆರೋಪ ಮಾಡಿದರು.
Advertisement
ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನ ತರಾತುರಿಯಲ್ಲಿ ಮಾಡಲಾಗುತ್ತಿದೆ. ಹಾಸನದಲ್ಲಿ ಕಾನೂನು ನಿಯಮ ಗಾಳಿಗೆ ತೂರಿ ಕೆಲಸ ನಡೆಯುತ್ತಿದೆ. ನಗರಸಭೆ ಅಧ್ಯಕ್ಷ ಸ್ಥಾನದ ಮೀಸಲಾತಿ 18ನೇ ಸ್ಥಾನದಲ್ಲಿತ್ತು. 52ನೇ ಸ್ಥಾನದಲ್ಲಿದ್ದ ಹಾಸನ ಜಿಲ್ಲೆಗೆ ಕಾನೂನು ಬಾಹಿರವಾಗಿ ನಿಗದಿ ಮಾಡಿದ್ದಾರೆ ಎಂದು ಆರೋಪಿಸಿದರು.
Advertisement
ಹಾಸನ ಜಿಲ್ಲಾಧಿಕಾರಿ ಮತ್ತು ಉಪವಿಭಾಗಾಧಿಕಾರಿ ಒಂದು ಪಕ್ಷದ ಏಜೆಂಟ್ ನಂತೆ ಕೆಲಸ ಮಾಡುತ್ತಿದ್ದಾರೆ. ಹಾಸನ ಜಿಲ್ಲೆಯ ಅಧಿಕಾರಿಗಳು ಬಿಜೆಪಿ ಮುಖಂಡರ ಅಧೀನದಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು. ಸಿಎಂ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು. ಅಡ್ವೋಕೇಟ್ ಜನರಲ್ ರವರು ಹಾಸನ ನಗರಸಭೆ ಸಾಮಾನ್ಯ ವರ್ಗಕ್ಕೆ ನಿಗದಿಯಾಗುತ್ತೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದರು. ಆ ಅಡ್ವೋಕೋಟ್ ಜನರಲ್ ಕೊರೊನಾ ಬಂತು ಅಂತ ಮನೆಗೆ ಹೋದ್ರು. ಈಗ ಹಾಸನ ಮತ್ತು ಅರಸೀಕೆರೆ ನಗರಸಭೆಗೆ ಎಸ್ ಟಿ ಮೀಸಲಾತಿ ನಿಗದಿ ಮಾಡಿದ್ದಾರೆಂದು ಆರೋಪ ಮಾಡಿದರು.
ಈ ಮೀಸಲಾತಿ ನಿಗದಿ ಮಾಡಿರುವುದು ಕಾನೂನು ಬಾಹಿರ. ನಾವು ಮೀಸಲಾತಿ ವಿರೋಧಿಸಿ ನ್ಯಾಯಾಲಯದ ಮೊರೆ ಹೋಗುತ್ತೇವೆ. ಸರ್ಕಾರಿ ಅಧಿಕಾರಿಗಳು ಬಿಜೆಪಿ ಕೈಗೊಂಬೆಯಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಬಾಲಮುರುಕ ಅಧಿಕಾರಿಗಳಿದ್ದಾರೆ ಎಂದು ರೇವಣ್ಣ ಕಿಡಿಕಾರಿದರು.