ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಸೀಟು (Medical Seat) ಹಂಚಿಕೆಯ ಎರಡನೇ ಸುತ್ತಿಗೆ ಹೆಚ್ಚುವರಿಯಾಗಿ 150 ವೈದ್ಯಕೀಯ ಸೀಟು ಲಭ್ಯವಾಗಿದ್ದು, ಆಸಕ್ತರು ಸೆ.9ರವರೆಗೆ ಆಪ್ಷನ್ಸ್ ದಾಖಲಿಸಬಹುದು ಎಂದು ಕೆಇಎ (KEA) ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ತಿಳಿಸಿದ್ದಾರೆ.
ಬಾಗಲಕೋಟೆಯ ಸರ್ಕಾರಿ ವೈದ್ಯಕೀಯ ಕಾಲೇಜಿಗೆ 100 ಸೀಟು ಹಾಗೂ ಫಾರೂಕಿಯ ವೈದ್ಯಕೀಯ ಕಾಲೇಜಿಗೆ ಹೆಚ್ಚುವರಿಯಾಗಿ 50 ಸೀಟು ಪ್ರವೇಶಕ್ಕೆ ಅವಕಾಶ ನೀಡಿ ವೈದ್ಯಕೀಯ ಶಿಕ್ಷಣ ಇಲಾಖೆ ಕೆಇಎಗೆ ಪತ್ರ ಬರೆದಿದೆ. ಹೀಗಾಗಿ ಬಾಗಲಕೋಟೆಯದು ಹೊಸ ಕಾಲೇಜಾಗಿರುವ ಕಾರಣ ಆ ಕಾಲೇಜಿನ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಎರಡನೇ ಸುತ್ತಿನಲ್ಲಿ ಭಾಗವಹಿಸಲು ಇಚ್ಛಿಸುವವರು ಲಾಗಿನ್ ಆಗಿ ಒಪ್ಪಿಗೆ ಸೂಚಿಸಬೇಕು. ಆಪ್ಷನ್ಸ್ ಅದಲು-ಬದಲು ಮಾಡಿಕೊಳ್ಳುವುದಕ್ಕೂ ಅವಕಾಶ ನೀಡಲಾಗಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: 1.10 ಲಕ್ಷ ಕೋಟಿ ರಕ್ಷಣಾ ಉತ್ಪನ್ನ ಖರೀದಿಗೆ ಗ್ರೀನ್ ಸಿಗ್ನಲ್ – 98% ಖರೀದಿ ಭಾರತದಲ್ಲೇ
ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆ ನಂತರ ಚಾಯ್ಸ್-2 ಮತ್ತು ಚಾಯ್ಸ್-3 ಆಯ್ಕೆ ಮಾಡಿರುವವರು ಹಾಗೂ ಸೀಟು ಹಂಚಿಕೆಯಾಗದಿರುವವರು ಈ ಸುತ್ತಿನಲ್ಲಿ ಭಾಗವಹಿಸಬಹುದು ಎಂದು ಅವರು ವಿವರಿಸಿದ್ದಾರೆ. ಇದನ್ನೂ ಓದಿ: UG-CET 3ನೇ ಸುತ್ತಿನ ಅಂತಿಮ ಫಲಿತಾಂಶ ಪ್ರಕಟ – ಕೆಇಎ
