ಆನೇಕಲ್: ಬೆಂಗಳೂರು ಗ್ರಾಮಾಂತರದ ಹುಸ್ಕೂರು ಮದ್ದೂರಮ್ಮ ಜಾತ್ರೆಯಲ್ಲಿ (Madduramma Jathre) ಕುರ್ಜುಗಳು (ತೇರು) ಧರೆಗುರುಳಿದ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಇಂದು ಸಾವನ್ನಪ್ಪಿದ್ದಾರೆ.
ಕುರ್ಜು ಕೆಳಗೆ ಸಿಲುಕಿ ನಿನ್ನೆ 28ರ ಯುವಕ ಲೋಹಿತ್ ದಾರುಣ ಸಾವನ್ನಪ್ಪಿದ್ದರು, ಇಂದು ಜ್ಯೋತಿ ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ಯುವಕ ರಾಕೇಶ್ ಸದ್ಯ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.
ಜಾತ್ರೆಗೆ ಗ್ರಾಮಗಳಿಂದ 150ಕ್ಕೂ ಹೆಚ್ಚು ಅಡಿ ಎತ್ತರದ ಕುರ್ಜುಗಳು ಆಗಮಿಸಿದ್ದವು. ತೇರು ಎಳೆದು ತರುವ ಸಂದರ್ಭದಲ್ಲಿ ಶನಿವಾರ ಅವಘಡ ಸಂಭವಿಸಿತ್ತು. ಇದನ್ನೂ ಓದಿ: ಅಲಹಾಬಾದ್ ಹೈಕೋರ್ಟ್ ಕಸದ ಬುಟ್ಟಿನಾ? – ನ್ಯಾ.ಯಶವಂತ್ ವರ್ಮಾ ವರ್ಗಾಯಿಸಿದ್ದಕ್ಕೆ ಬಾರ್ ಕೌನ್ಸಿಲ್ ಗರಂ
ಮದ್ದೂರಮ್ಮ ಜಾತ್ರೆಗೆ 200 ವರ್ಷಗಳ ಇತಿಹಾಸವಿದೆ. ಟ್ರ್ಯಾಕ್ಟರ್ ಹಾಗೂ ನೂರಾರು ಎತ್ತುಗಳ ಮೂಲಕ ಎಳೆದು ತರುವ ಹೆಸರಾಂತ ಜಾತ್ರೆ ಇದು. ಪ್ರತಿಷ್ಟೆಗೆ ಅತೀ ಎತ್ತರ ತೇರು ಕಟ್ಟಿ ಎಳೆದು ತರುವ ಜಾತ್ರೆ ನೋಡಲು ಲಕ್ಷಾಂತರ ಜನ ಆಗಮಿಸುತ್ತಿದ್ದರು. ಗಾಳಿ ಸಹಿತ ಮಳೆಯಿಂದಾಗಿ ಆಯತಪ್ಪಿ ತೇರು ಬಿದ್ದಿದೆ.
ತೇರಿನಲ್ಲಿ ಇದ್ದ ಹಲವರಿಗೆ ಗಾಯಗಳಾಗಿವೆ. ಕಳೆದ ವರ್ಷ ಹೀಲಲಿಗೆ ತೇರು ಬಿದ್ದಿತ್ತು. ಇಂದು ಗಾಳಿ ಮಳೆ ಹೆಚ್ಚಾಗಿ ಸುರಿದ ಹಿನ್ನೆಲೆ ಅವಘಡ ಸಂಭವಿಸಿದೆ. ಜಾತ್ರೆಮಯ ಸಂಭ್ರಮದ ದಿನ ಸೂತಕದ ಛಾಯೆ ಆವರಿಸಿದೆ. ಇದನ್ನೂ ಓದಿ: ಜಡ್ಜ್ ಮನೆಯಲ್ಲಿ ಹಣ ಸಿಕ್ಕಿಲ್ಲ ಎಂದು ಹೇಳೇ ಇಲ್ಲ, ನನ್ನ ಹೆಸರು ಯಾಕೆ ಉಲ್ಲೇಖಿಸಿದ್ದಾರೆ ಗೊತ್ತಿಲ್ಲ ಎಂದ ಅಗ್ನಿಶಾಮಕ ದಳದ ಮುಖ್ಯಸ್ಥ