ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿಡಲಾಗಿದ್ದ 150ಕ್ಕೂ ಹೆಚ್ಚು ನಾಡಬಾಂಬ್‌ಗಳು (Country Made Bomb) ಹಾಗೂ ನಾಡಬಂದೂಕೊಂದನ್ನ ಜಪ್ತಿ ಮಾಡಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ 35 ವರ್ಷದ ನರಸಿಂಹಪ್ಪ ಎಂಬ ವ್ಯಕ್ತಿಯನ್ನ ಬಟ್ಲಹಳ್ಳಿ ಪೊಲೀಸರು ಬಂಧಿಸಿದ್ದಾರೆ ಖಚಿತ ಮಾಹಿತಿ ಆಧರಿಸಿ ಬಟ್ಲಹಳ್ಳಿ ಪೊಲೀಸರು (Baltahalli Police) ದಾಳಿ ನಡೆಸಿದ್ದು, ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 150 ನಾಡಬಾಂಬ್‌ಗಳು ಹಾಗೂ ಒಂದು ನಾಡಬಂದೂಕನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯು ಇಷ್ಟೊಂದು ಬೃಹತ್ ಪ್ರಮಾಣದ ಸ್ಫೋಟಕಗಳು ಮತ್ತು ಬಂದೂಕನ್ನು ಏತಕ್ಕಾಗಿ ಹಾಗೂ ಯಾವುದಕ್ಕಾಗಿ ಸಂಗ್ರಹಿಸಿಟ್ಟಿದ್ದ ಎಂಬ ಕುರಿತು ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಜರುಗಿಸಿದ್ದಾರೆ.

