ಬೆಂಗಳೂರು: ರಾಜ್ಯದಲ್ಲಿ ಮುಂದಿನ ವರ್ಷ ಮೇ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, 150 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಕಾಂಗ್ರೆಸ್ ಹೊಂದಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಈ ವಾರ ರಾಹುಲ್ ಗಾಂಧಿ ಅವರು ಎರಡು ದಿನಗಳ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಕಠಿಣ ಪರಿಶ್ರಮ ಮತ್ತು ಅರ್ಹತೆ ಹೊಂದಿರುವವರಿಗೆ ಮಾತ್ರ ಚುನಾವಣೆ ಟಿಕೆಟ್ ನೀಡಲು ನಿರ್ಧರಿಸಿವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಪ್ರಧಾನಿ ರಾಜ್ಯದ ಹಕ್ಕುಗಳನ್ನು ದೋಚುತ್ತಿದ್ದಾರೆ: ಭಗವಂತ್ ಮಾನ್
Advertisement
Advertisement
ಕರ್ನಾಟಕದಲ್ಲಿ 150 ಸೀಟುಗಳನ್ನು ಗೆಲ್ಲುವ ಗುರಿಯನ್ನು ನಾವು ಹೊಂದಿದ್ದೇವೆ. ಅದಕ್ಕೆ ಒಂದು ಸೀಟು ಕೂಡ ಕಡಿಮೆಯಾಗುವಂತಿಲ್ಲ. ಹಾಗಾಗಿ ಕಠಿಣ ಪರಿಶ್ರಮ ಮತ್ತು ಅರ್ಹತೆ ಇರುವ ಅಭ್ಯರ್ಥಿಗಳಿಗೆ ಮಾತ್ರ ಟಿಕೆಟ್ ನೀಡಲಾಗುತ್ತದೆ. ಪ್ರತಿಯೊಬ್ಬ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಜನರ ಸಮಸ್ಯೆಗಳ ವಿರುದ್ಧ ಹೋರಾಡಬೇಕು ಮತ್ತು ಅವರ ನಂಬಿಕೆಯನ್ನು ಗಳಿಸಬೇಕು ಎಂದಿದ್ದಾರೆ.
Advertisement
Advertisement
60 ಲಕ್ಷ ಹೊಸ ಕಾಂಗ್ರೆಸ್ ಸದಸ್ಯರನ್ನು ಸೇರ್ಪಡೆಗೊಳಿಸಲು ಶ್ರಮಿಸಿದ ಪ್ರತಿಯೊಬ್ಬ ಕರ್ನಾಟಕ ಕಾಂಗ್ರೆಸ್ ಕಾರ್ಯಕರ್ತರು, ಸ್ವಯಂಸೇವಕರು ಮತ್ತು ನಾಯಕರಿಗೆ ನಾನು ಅಭಿನಂದಿಸುತ್ತೇನೆ. ಹೊಸ ಸದಸ್ಯರಲ್ಲಿ ಹೆಚ್ಚಿನವರು ಯುವಕರಾಗಿದ್ದು, ಈ ಯುವಜನತೆಯಿಂದ ಪಕ್ಷಕ್ಕೆ ಶಕ್ತಿ ಮತ್ತು ಹೊಸ ಆಲೋಚನೆಗಳು ಮೂಡುತ್ತದೆ ಎಂದು ನನಗೆ ಭರವಸೆ ಇದೆ. ಪಕ್ಷವು ಲವಲವಿಕೆಯಿಂದ ಕೂಡಿರುತ್ತದೆ ಎಂದು ಹೇಳಿದ್ದಾರೆ.
2018ರಲ್ಲಿ ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 80 ಸ್ಥಾನಗಳನ್ನು ಗೆದ್ದಿದ್ದರೆ, ಬಿಜೆಪಿ 104 ಸ್ಥಾನಗಳನ್ನು ಗಳಿಸಿತ್ತು. ರಾಜ್ಯ ವಿಧಾನಸಭೆಯಲ್ಲಿ 224 ಸ್ಥಾನಗಳಿದ್ದು, 113 ಸ್ಥಾನಗಳು ಬಹುಮತ ಸಿಕ್ಕಿತ್ತು. ಇದನ್ನೂ ಓದಿ: ದೆಹಲಿಯಲ್ಲಿ ರಾಕಿಬಾಯ್ ನೋಡಲು ಮುಗಿಬಿದ್ದ ಅಭಿಮಾನಿಗಳು