ಕಾನ್ಬೆರಾ: ಗರ್ಭಪಾತದ ಹಕ್ಕನ್ನು ನಿಷೇಧಿಸಿರುವ ಅಮೆರಿಕ ಸರ್ಕಾರದ ವಿರುದ್ಧ ಹೋರಾಟ ಭುಗಿಲೆದ್ದಿದೆ. ಅಮೆರಿಕ ಮಹಿಳೆಯರ ಹೋರಾಟ ಬೆಂಬಲಿಸಿ ಆಸ್ಟ್ರೇಲಿಯನ್ನರೂ ತಮ್ಮ ದೇಶದಲ್ಲಿ ಹೋರಾಟ ನಡೆಸುತ್ತಿದ್ದಾರೆ.
ಗರ್ಭಪಾತ ಹಕ್ಕು ನಿಷೇಧವನ್ನು ಖಂಡಿಸಿ ಆಸ್ಟ್ರೇಲಿಯಾದ ಮೆಲ್ಬರ್ನ್ ಸುಮಾರು 15,000ಕ್ಕೂ ಹೆಚ್ಚು ಮಂದಿ ಘೋಷಣಾ ಫಲಕಗಳನ್ನು ಹಿಡಿದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದ್ದಾರೆ. ಇದನ್ನೂ ಓದಿ: 48 ವರ್ಷಗಳ ಹಿಂದೆ ಹೀಗಿತ್ತು ನನ್ನ ರೆಸ್ಯೂಮ್ – ಉದ್ಯೋಗಾಕಾಂಕ್ಷಿಗಳಿಗೆ ಆತ್ಮವಿಶ್ವಾಸ ತುಂಬಿದ ಬಿಲ್‌ಗೇಟ್ಸ್
Advertisement
Advertisement
ನಾವು ಆಸ್ಟ್ರೇಲಿಯಾದ ಮಹಿಳೆಯರು ಮಾತ್ರವಲ್ಲ ವಿಶ್ವದಾದ್ಯಂತ ಇರುವ ಮಹಿಳೆಯರ ಹಕ್ಕುಗಳ ರಕ್ಷಣೆಗೂ ನಿಲ್ಲುತ್ತೇವೆ. ಅಮೆರಿದಲ್ಲಿ ಲಕ್ಷಾಂತರ ಮಹಿಳೆಯರು ತಮ್ಮ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ. ಇದರಿಂದ ನಾವೂ ಕೋಪಗೊಂಡಿದ್ದೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕೋಮಾದಲ್ಲಿರುವ ಮಗನ ಜೀವ ಉಳಿಸಲು ದೇವರ ಮೊರೆ ಹೋದ ತಾಯಿ – ಮಗು ಚೇತರಿಕೆ!
Advertisement
Advertisement
ಈಗ ಅಮೆರಿಕದಲ್ಲಿರುವಂತೆ ಆಸ್ಟ್ರೇಲಿಯಾದ ರಾಜ್ಯಗಳೂ ಗರ್ಭಪಾತದ ಕಾನೂನುಗಳನ್ನು ಹೊರಡಿಸಲು ಮುಂದಾಗಿವೆ. ದೇಶದಲ್ಲೇ ಅತಿಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ನ್ಯೂ ಸೌತ್‌ವೆಲ್ 2019ರಲ್ಲಿ ಗರ್ಭಪಾತವನ್ನು ಕಾನೂನುಬದ್ಧಗೊಳಿಸಿದೆ. ಅದುವೇ ಕಾನೂನು ಮಾಡಿದ ಕೊನೆಯ ರಾಜ್ಯ. ಇದೀಗ ಅಮೆರಿಕದಲ್ಲಿ ಕಾನೂನು ಅನುಷ್ಟಾನಗೊಂಡ ಬೆನ್ನಲ್ಲೇ ಆಸ್ಟ್ರೇಲಿಯಾದಲ್ಲಿಯೂ ಕಾನೂನು ಜಾರಿಗೊಳಿಸಲಾಗುತ್ತಿದೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ.
ಏನಿದು ಘಟನೆ?: ಗರ್ಭಪಾತದ ಸಾಂವಿಧಾನಿಕ ಹಕ್ಕನ್ನು ಅಮೆರಿಕದ ಸುಪ್ರೀಂ ಕೋರ್ಟ್ ಈಚೆಗಷ್ಟೇ ರದ್ದುಗೊಳಿಸಿತು. ಗರ್ಭಪಾತಕ್ಕೆ ಸಂಬಂಧಿಸಿದಂತೆ ಸಾಂವಿಧಾನಿಕ ಹಕ್ಕು ಎಂದು ಘೋಷಿಸಲಾಗಿದ್ದ 1973ರ ತೀರ್ಪನ್ನು ಅಮೆರಿಕ ಸುಪ್ರೀಂ ಕೋರ್ಟ್ ಕಳೆದ ಶುಕ್ರವಾರ ರದ್ದುಗೊಳಿಸಿತು. ಈ ನಿರ್ಧಾರವನ್ನು ವಿರೋಧಿಸಿ ದೇಶದ ಪ್ರಮುಖ ನಗರಗಳಲ್ಲಿ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದಾರೆ.