Bengaluru CityCoronaDistrictsKarnatakaLatestMain Post

ಇಂದು 155 ಕೇಸ್ – 166 ಮಂದಿ ಆಸ್ಪತ್ರೆಯಿಂದ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 155 ಪಾಸಿಟಿವ್ ಕೇಸ್ ದಾಖಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 150 ಕೇಸ್ ಪತ್ತೆಯಾಗಿದ್ದು, ಉಳಿದ ಮೂರು ಜಿಲ್ಲೆಗಳಲ್ಲಿ 5 ಪ್ರಕರಣ ಪತ್ತೆಯಾಗಿದೆ.

ಇಂದು ರಾಜ್ಯದಲ್ಲಿ ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 166 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.77 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,655ಕ್ಕೆ ತಲುಪಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಇದನ್ನೂ ಓದಿ: ಬೆಂಗಳೂರು ಸೇರಿ ರಾಜ್ಯಾದ್ಯಂತ ಬಿಡುವು ನೀಡಿದ ಮಳೆರಾಯ

ಈವರೆಗೆ ರಾಜ್ಯದಲ್ಲಿ ಒಟ್ಟು 39,50,378 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,08,617 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 75,388 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 20,048 ಸ್ಯಾಂಪಲ್ (ಆರ್​ಟಿಪಿಸಿಆರ್ 15,024 + 5,024 ರ್‍ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: RSS ಕೋಮುವಾದಿ ಸಂಘಟನೆ ಎಂದು ಬಿಂಬಿಸಿದ ಆರೋಪ – ವಿವಾದದ ಕೇಂದ್ರವಾದ ವೀರಸೌಧ ಚಿತ್ರ ಗ್ಯಾಲರಿ

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 150, ದಕ್ಷಿಣ ಕನ್ನಡ 3, ದಾವಣಗೆರೆ ಮತ್ತು ರಾಯಚೂರಿನಲ್ಲಿ ತಲಾ ಒಂದೊಂದು ಪ್ರಕರಣ ಸೇರಿ ಒಟ್ಟು 155 ಪ್ರಕರಣ ವರದಿಯಾಗಿದೆ.

Leave a Reply

Your email address will not be published.

Back to top button