ಬೆಂಗಳೂರು: ರಾಜ್ಯದಲ್ಲಿ ಇಂದು ಒಟ್ಟು 156 ಪಾಸಿಟಿವ್ ಕೇಸ್ ಪತ್ತೆಯಾಗಿದೆ. ನಿನ್ನೆ 157 ಕೇಸ್ ಪತ್ತೆಯಾಗಿತ್ತು. ಇಂದು ಏಕೈಕ ಪ್ರಕರಣ ಇಳಿಕೆ ಕಂಡಿದೆ. ಈ ಪೈಕಿ ಬೆಂಗಳೂರಿನಲ್ಲಿ 143 ಕೇಸ್ ದಾಖಲಾಗಿದೆ.
ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 0.80 ದಾಖಲಾಗಿದ್ದು, ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1,861ಕ್ಕೆ ಇಳಿಕೆ ಕಂಡಿದೆ. ಇಂದು ಕೂಡ ಶೂನ್ಯ ಮರಣ ಮುಂದುವರಿದಿದೆ. ರಾಜ್ಯದಲ್ಲಿ ಈವರೆಗೆ ಒಟ್ಟು 40,063 ಮರಣ ಪ್ರಕರಣ ಪತ್ತೆಯಾಗಿದ್ದು, ಇಂದು 179 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈವರೆಗೆ ರಾಜ್ಯದಲ್ಲಿ ಒಟ್ಟು 39,49,446 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,07,480 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 47,220 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 19,500 ಸ್ಯಾಂಪಲ್ (ಆರ್ಟಿಪಿಸಿಆರ್ 14,160 + 5,340 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 143, ದಕ್ಷಿಣ ಕನ್ನಡ 5, ಕೋಲಾರ 4, ಧಾರವಾಡ, ರಾಯಚೂರು, ತುಮಕೂರು ಮತ್ತು ಯಾದಗಿರಿಯಲ್ಲಿ ತಲಾ ಒಂದೊಂದು ಸೇರಿ ಒಟ್ಟು 156 ಪ್ರಕರಣ ವರದಿಯಾಗಿದೆ.