ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರಿಂದು ದಾಖಲೆಯ 15ನೇ ಬಾರಿ ಬಜೆಟ್ ಮಂಡನೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಸರ್ಕಾರದ ಈ ಅವಧಿಯ ಮೊದಲ ಪೂರ್ಣ ಪ್ರಮಾಣದ ಬಜೆಟ್ ಮಂಡನೆ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ನಡುವೆ ಬೆಟ್ಟದಷ್ಟು ನಿರೀಕ್ಷೆಗಳಿವೆ. ಇದನ್ನೂ ಓದಿ: ವಸತಿ ಶಾಲಾ-ಕಾಲೇಜುಗಳಲ್ಲಿ ಧಾರ್ಮಿಕ ಹಬ್ಬಗಳ ಆಚರಣೆಗೆ ಬ್ರೇಕ್; ಆದೇಶ ವಾಪಸ್
Advertisement
ಬೆಳಗ್ಗೆ 10:15 ರಿಂದ ಬಜೆಟ್ ಮಂಡಿಸಲಿದ್ದಾರೆ. ಬಜೆಟ್ ಗಾತ್ರ 3.75 ಲಕ್ಷ ಜೋಟಿ ರೂ.ನಿಂದ 3.80 ಲಕ್ಷ ಕೋಟಿ ರೂ.ಗಳ ವರೆಗೆ ಇರಲಿದೆ ಎನ್ನಲಾಗಿದೆ. ಈ ಬಾರಿ ರಾಜದಲ್ಲಿ ತೆರಿಗೆ ಬರೆ ಇಲ್ಲದೇ ಬಜೆಟ್ ಮಂಡನೆ ಮಾಡುತ್ತಾರಾ? ಜನಪ್ರಿಯ ಯೋಜನೆ ಘೋಷಣೆ ಮಾಡದೇ ಕೇಂದ್ರ ಸರ್ಕಾರದ ಹಾದಿ ತುಳಿಯುತ್ತಾರಾ? ಇಲ್ಲ ಲೋಕಸಭೆ ಚುನಾವಣೆಗಾಗಿ ಭರ್ಜರಿ ಕೊಡುಗೆಗಳನ್ನ ಕೊಟ್ಟು ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುತ್ತಾರಾ? ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಹಿಂದ ವರ್ಗಕ್ಕೆ ದೊಡ್ಡ ಗಿಫ್ಟ್ ಸಿಗಲಿದೆಯಾ? ಅನ್ನೋ ಬಗ್ಗೆ ಸಾಕಷ್ಟು ಕುತೂಹಲಗಳಿವೆ. ಇದನ್ನೂ ಓದಿ: ಚುನಾವಣಾ ಬಾಂಡ್ ರದ್ದು; ಮೋದಿ ಭ್ರಷ್ಟ ನೀತಿಗಳಿಗೆ ಮತ್ತೊಂದು ಉದಾಹರಣೆ ಎಂದ ರಾಹುಲ್ ಗಾಂಧಿ
Advertisement
Advertisement
ಸಿದ್ದರಾಮಯ್ಯ ಬಜೆಟ್ ಮೇಲೆ ಜನರ ನಿರೀಕ್ಷೆ!?
* ತೆರಿಗೆ ಹೆಚ್ಚಳ ಮಾಡದೇ ಜನಪ್ರಿಯ ಯೋಜನೆಗಳ ನಿರೀಕ್ಷೆ
* ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿ ಬಗ್ಗೆ ಸರ್ಕಾರಿ ನೌಕರರಲ್ಲಿ ನಿರೀಕ್ಷೆ.
* ಮಹಿಳಾ ಉದ್ಯಮಿಗಳಿಗೆ ಉದ್ಯಮ ಸ್ಥಾಪನೆಗೆ ವಿಶೇಷ ಅನುದಾನ ಯೋಜನೆ. ಬಡ್ಡಿರಹಿತ ಸಾಲ ನೀಡುವ ಮೊತ್ತ ಹೆಚ್ಚಳ.
* ಸಾಮಾಜಿಕ ಭದ್ರತೆಗಳ ಮಾಶಾನಸ ಹೆಚ್ಚಳ ಮಾಡುವ ನಿರೀಕ್ಷೆ.( ವೃದ್ಧಾಪ್ಯ ವೇತನ, ವಿಧವಾ ವೇತನ)
* ಅಂಗನವಾಡಿ ಕಾರ್ಯಕರ್ತರ ವೇತನ ಹೆಚ್ಚಳ. ಆರೋಗ್ಯ ವಿಮೆ ಯೋಜನೆ ಜಾರಿ ನಿರೀಕ್ಷೆ.
* ಸ್ತ್ರೀ ಶಕ್ತಿ ಸಂಘಗಳ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಬಹುದು.
* ಶಕ್ತಿ ಯೋಜನೆಯಿಂದ ನಷ್ಟವಾಗಿರೋ ಆಟೋ ವಲಯ,ಖಾಸಗಿ ಬಸ್ ಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ.
* ಆಶಾ ಕಾರ್ಯಕರ್ತೆಯರ ಗೌರವ ಧನ ಹೆಚ್ಚಳ ನಿರೀಕ್ಷೆ.
* ಯುವ ಉದ್ಯಮಿಗಳಿಗೆ ಉದ್ಯಮ ಸ್ಥಾಪನೆಗೆ ವಿಶೇಷ ಯೋಜನೆ/ ಬಡ್ಡಿರಹಿತ ಸಾಲ ಸೌಲಭ್ಯ ಯೋಜನೆ ಘೋಷಣೆ.
* ಗ್ರಾ.ಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯ ವೇತನ ಹೆಚ್ಚಳ ಮತ್ತು ಉಚಿತ ಬಸ್ ಪಾಸ್ ನೀಡುವುದು.
* ಮೇಕೆದಾಟು, ಭದ್ರಾ ಮೇಲ್ದಂಡೆ ಯೋಜನೆ ಸೇರಿ ನೀರಾವರಿ ಯೋಜನೆಗಳಿಗೆ ವಾರ್ಷಿಕ 50 ಸಾವಿರ ಕೋಟಿ ರೂ.ಮೀಸಲಿಡುವ ನಿರೀಕ್ಷೆ.
* ವಸತಿ ರಹಿತ ಕುಟುಂಬಗಳಿಗೆ ಸರ್ಕಾರದಿಂದ ಕೊಡುವ ಮನೆಗಳ ಸಬ್ಸಿಡಿ ದರ ಹೆಚ್ಚಳ ನಿರೀಕ್ಷೆ.