InternationalLatestLeading NewsMain Post

ತಮಿಳುನಾಡಿನ 16 ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ನೌಕಾಪಡೆ!

ಜಯವರ್ಧನಾಪುರ: ಶ್ರೀಲಂಕಾದ ನೌಕಾಪಡೆ ತಮಿಳುನಾಡಿನ 16 ಮೀನುಗಾರರನ್ನು ಬಂಧಿಸಿದೆ.

ಇಂದು ಬೆಳಗ್ಗಿನ ಜಾವ 2 ಗಂಟೆ ಸುಮಾರಿಗೆ ತಮಿಳುನಾಡಿನ ರಾಮೇಶ್ವರಂನಿಂದ ಡೆಲ್ಫ್ ದ್ವೀಪದ ಬಳಿ 16 ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ ಎಂದು ರಾಜ್ಯದ ಕ್ಯೂ ಬ್ರಾಂಚ್ ಪೊಲೀಸರು ತಿಳಿಸಿದ್ದಾರೆ.

ನೌಕಾಪಡೆ ಈ ವೇಳೆ ಮೀನುಗಾರರ ಬಳಿ ಇದ್ದ ಮೂರು ದೋಣಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಬಂಧಿಯಾದ ಮೀನುಗಾರರ ಬಗ್ಗೆ ಹೆಚ್ಚು ಮಾಹಿತಿ ಲಭ್ಯವಾಗಿಲ್ಲವೆಂದು ಮೂಲಗಳ ಪ್ರಕಾರ ತಿಳಿದುಬಂದಿದೆ. ಇದನ್ನೂ ಓದಿ: 99 ವರ್ಷದ ವೃದ್ಧೆಯನ್ನೂ ಬಿಡದ ಪಾಪಿ – ಹಿಡನ್ ಕ್ಯಾಮೆರಾದಲ್ಲಿ ಕ್ರೌರ್ಯ ಸೆರೆ!

ಕಳೆದ ವಾರವೂ ಸಹ ಶ್ರೀಲಂಕಾ ನೌಕಾಪಡೆಯು 21 ಭಾರತೀಯ ಮೀನುಗಾರರನ್ನು ಬಂಧಿಸಿ ಅವರ ಎರಡು ದೋಣಿಗಳನ್ನು ವಶಪಡಿಸಿಕೊಂಡಿತ್ತು.

Leave a Reply

Your email address will not be published. Required fields are marked *

Back to top button