ಗ್ಯಾಂಗ್ಟಾಕ್: ಭಾರತೀಯ ಸೇನಾ ವಾಹನವು (Army Truck) ಕಣಿವೆಗೆ ಉರುಳಿ 16 ಯೋಧರು ಹುತಾತ್ಮರಾಗಿರುವ ದುರ್ಘಟನೆ ಉತ್ತರ ಸಿಕ್ಕಿಂನ (Sikkim) ಝೆಮಾ ಎಂಬಲ್ಲಿ ನಡೆದಿದೆ.
ಸೈನಿಕರು (Soldiers) ಪ್ರಯಾಣಿಸುತ್ತಿದ್ದ ಟ್ರಕ್ ಕಡಿದಾದ ಇಳಿಜಾರಿನಲ್ಲಿ ಆಯತಪ್ಪಿ ಕಣಿವೆಗೆ ಬಿದ್ದಿದ್ದರಿಂದ ಭಾರತೀಯ ಸೇನೆಯ ಮೂವರು ಜೂನಿಯರ್ ಕಮಿಷನ್ಡ್ ಅಧಿಕಾರಿಗಳು ಸೇರಿದಂತೆ 16 ಯೋಧರು ಹುತಾತ್ಮರಾಗಿದ್ದಾರೆ ಎಂದು ಭಾರತೀಯ ಸೇನೆಯು ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ನಿವೃತ್ತ ಪ್ರಾಧ್ಯಾಪಕಿ ಶೆಲ್ಲಿ ದೆಹಲಿ ಮೇಯರ್ ಅಭ್ಯರ್ಥಿಯಾಗಿ ಘೋಷಣೆ
Advertisement
Advertisement
ಈ ವಾಹನವು ಮೂರು ವಾಹನಗಳ ಬೆಂಗಾವಲು ಪಡೆಯ ಭಾಗವಾಗಿತ್ತು. ಬೆಳಗ್ಗೆ ಚಾಟೆನ್‌ನಿಂದ ಥಾಂಗು ಕಡೆಗೆ ಹೊರಟಿತ್ತು. ಝೆಮಾದಲ್ಲಿ ಸಾಗುತ್ತಿದ್ದಾಗ ವಾಹನವು ತೀಕ್ಷ್ಣವಾದ ತಿರುವಿನಲ್ಲಿ ಆಯತಪ್ಪಿ ಕಣಿವೆಗೆ ಉರುಳಿದೆ ಎಂದು ಸೇನೆ ಹೇಳಿದೆ. ಅಪಘಾತದಲ್ಲಿ ಗಾಯಗೊಂಡ ನಾಲ್ವರು ಯೋಧರನ್ನು ಚಿಕಿತ್ಸೆಗಾಗಿ ಏರ್‌ಲಿಫ್ಟ್ ಮಾಡಲಾಗಿದೆ.
Advertisement
Advertisement
ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh), ಹುತಾತ್ಮ ಯೋಧರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. “ಉತ್ತರ ಸಿಕ್ಕಿಂನಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ ಭಾರತೀಯ ಸೇನೆಯ ಸಿಬ್ಬಂದಿಯ ಪ್ರಾಣಹಾನಿಯಿಂದ ತೀವ್ರ ನೋವಾಗಿದೆ. ಅವರ ಸೇವೆ ಮತ್ತು ಬದ್ಧತೆಗೆ ರಾಷ್ಟ್ರವು ಆಳವಾಗಿ ಕೃತಜ್ಞವಾಗಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲು ಪ್ರಾರ್ಥಿಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯ ತುರ್ತು ಬಳಕೆಗೆ ಕೇಂದ್ರ ಸರ್ಕಾರ ಅನುಮತಿ