Wednesday, 19th June 2019

ಮಹಾರಾಷ್ಟ್ರದಲ್ಲಿ ನಕ್ಸಲರ ಅಟ್ಟಹಾಸ – 16 ಭದ್ರತಾ ಸಿಬ್ಬಂದಿ ಹುತಾತ್ಮ

ಮುಂಬೈ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿ ಮಾಸುವ ಮುನ್ನವೇ ಮೊತ್ತೊಂದು ದುರ್ಘಟನೆ ಮಹಾರಾಷ್ಟ್ರದಲ್ಲಿ ಮರುಕಳಿಸಿದೆ. ಮಹಾರಾಷ್ಟ್ರದ ಗಡ್‍ಚಿರೋಲಿಯಲ್ಲಿ ನಕ್ಸಲರು ಐಇಡಿ ಬಳಸಿ ಸ್ಫೋಟಿಸಿದ್ದು, 16 ಮಂದಿ ನಕ್ಸಲ್ ನಿಗ್ರಹ ದಳದ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

ಗಡ್‍ಚಿರೋಲಿ ಜಿಲ್ಲೆಯ ಕುರ್ಖೇಡಾನಲ್ಲಿ ಈ ಕೃತ್ಯ ನಡೆದಿದೆ. ಸಿ-60 ಪೊಲೀಸರ ತಂಡ ಕುರ್ಖೆಡಾಕ್ಕೆ ವಾಹನದಲ್ಲಿ ತೆರಳುತ್ತಿದ್ದಾಗ ಐಇಡಿ ಬಳಸಿ ಸ್ಫೋಟಿಸಿದ್ದಾರೆ. 15 ಮಂದಿ ಪೊಲೀಸರ ಜೊತೆ ಡ್ರೈವರ್ ಈ ದಾಳಿಗೆ ಬಲಿಯಾಗಿದ್ದಾರೆ.

ಈ ಘಟನೆಯ ಬೆನ್ನಲ್ಲೇ ನಕ್ಸಲರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ದಾಳಿ ನಡೆಯುತ್ತಿದೆ. ಈ ಪ್ರದೇಶದಲ್ಲಿ ಭಾರೀ ಸಂಖ್ಯೆಯಲ್ಲಿ ನಕ್ಸಲರು ಸೇರಿ ಈ ಕೃತ್ಯ ಎಸಗಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ.

ಖಾಸಗಿ ಗುತ್ತಿಗೆದಾರರೊಬ್ಬರಿಗೆ ಸೇರಿದ್ದ ಎರಡು ಜೆಸಿಬಿ, 11 ಟಿಪ್ಪರ್, ಡೀಸೆಲ್ ಮತ್ತು ಪೆಟ್ರೋಲ್ ಟ್ಯಾಂಕರ್ಸ್, ರೋಡ್ ರೋಲರ್ಸ್, ಜನರೇಟರ್ ವ್ಯಾನ್‍ಗಳು ಸೇರಿದಂತೆ 25 ವಾಹನಗಳಿಗೆ ನಕ್ಸಲರು ಬೆಂಕಿ ಹಚ್ಚಿದ್ದಾರೆ. ಬೆಂಕಿಗೆ ಆಹುತಿಯಾದ ವಾಹನಗಳ ಸುಟ್ಟು ಕರಕಲಾಗಿವೆ.

ಈ ಕುರಿತು ಪ್ರತಿಕ್ರಿಯೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದಾಳಿಕೋರರ ಕೃತ್ಯವನ್ನು ಸಹಿಸುವುದಿಲ್ಲ. ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *