LatestMain PostNational

ಕೊರಿಯನ್ ವೀಡಿಯೋ ನೋಡುವ ಹವ್ಯಾಸ ಬೆಳೆಸಿಕೊಂಡಿದ್ದ ವಿದ್ಯಾರ್ಥಿನಿ ಆತ್ಮಹತ್ಮೆ

ತಿರುವನಂತಪುರಂ: ಬಾಲಕಿಯೊಬ್ಬಳು ಕೊರಿಯನ್ ವೀಡಿಯೋಗಳನ್ನು ನೋಡುವ ಹವ್ಯಾಸವನ್ನು ಬೆಳೆಸಿಕೊಂಡಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ನಡೆದಿದೆ.

ಪರೀಕ್ಷೆಯಲ್ಲಿ ಕಡಿಮೆ ಅಂಕ ಗಳಿಸುತ್ತಿದ್ದೇನೆ ಮತ್ತು ನನಗೆ ಗೆಳೆಯರು ಯಾರೂ ಇಲ್ಲ. ಅಲ್ಲದೆ, ಕೊರಿಯನ್ ಮ್ಯೂಸಿಕ್ ವಿಡಿಯೊಗಳನ್ನು ವಿಪರೀತವಾಗಿ ನೋಡುತ್ತಿದ್ದೇನೆ. ಅದರಿಂದ ಹೊರಬರಲಾಗುತ್ತಿಲ್ಲ ಎಂದು ವಿದ್ಯಾರ್ಥಿನಿ ಡೆತ್‍ನೋಟ್‍ನಲ್ಲಿ ಬರೆದಿದ್ದಾಳೆ. ಇದನ್ನೂ ಓದಿ: ಸುಳ್ಯದ ಯುವಕನ ಮೇಲೆ ಗುಂಡಿನ ದಾಳಿ

10ನೇ ತರಗತಿಯಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದ ಈಕೆ ಖಿನ್ನತೆಗೆ ಜಾರಿದ್ದಳು. ಮನೆಯಲ್ಲೇ ಓದಲೆಂದು ಕೊಠಡಿಯನ್ನು ಬಂದ್ ಮಾಡುತ್ತಿದ್ದಳು. ಓದಲೆಂದು ಬಾಗಿಲು ಹಾಕಿಕೊಂಡಿದ್ದ ವಿದ್ಯಾರ್ಥಿನಿ ಕೊಠಡಿಯಲ್ಲೇ ನೇಣಿಗೆ ಶರಣಾಗಿದ್ದಾಳೆ. ಇದನ್ನೂ ಓದಿ: ಮೂಸೆವಾಲಾ ರೀತಿಯಲ್ಲೇ ಹತ್ಯೆ ಮಾಡೋದಾಗಿ ಸಲ್ಮಾನ್‌ಖಾನ್‌ಗೆ ಬೆದರಿಕೆ – ಕೃಷ್ಣಮೃಗ ಬೇಟೆಯೇ ಮುಳುವಾಯ್ತ?

ಓದಿನಲ್ಲಿ ಹಿಂದುಳಿದಿರುವುದು ಮತ್ತು ಕೊರಿಯನ್ ವೀಡಿಯೊ ನೋಡುವ ವ್ಯಸನ ಬೆಳೆಸಿಕೊಂಡಿರುವುದರಿಂದ ಅವಳು ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಅದಕ್ಕೆ ಪೂರಕವಾಗಿ ಬಾಲಕಿ ಬರೆದಿರುವ ಡೆತ್‍ನೋಟ್ ಸಿಕ್ಕಿದೆ. ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಪೊಲೀಸರು ಹೇಳಿದ್ದಾರೆ.

Leave a Reply

Your email address will not be published.

Back to top button