ಚಿಕ್ಕಮಗಳೂರು: ಜಿಲ್ಲೆಯ (Chikkamagaluru) ಕಳಸ (Kalasa) ಸುತ್ತಮುತ್ತಾ ಭಾರೀ ಗಾಳಿ ಮಳೆಯಾಗುತ್ತಿದ್ದು, ಸಿಡಿಲಿಗೆ (Lightning) ಬಾಲಕನೊಬ್ಬ ಬಲಿಯಾಗಿದ್ದಾನೆ.
ಮೃತ ಬಾಲಕನನ್ನು ಅಸ್ಸಾಂ ಮೂಲದ ಮೌರುದ್ದಿನ್ (16) ಎಂದು ಗುರುತಿಸಲಾಗಿದೆ. ಕಳಸದ ಗುಮ್ಮನಖಾನ್ ಎಸ್ಟೇಟ್‍ನ ಲೈನ್ ಮನೆಯಲ್ಲಿ ಮಲಗಿದ್ದಾಗ ಸಿಡಿಲು ಬಡಿದಿದೆ. ಬಾಲಕ ಕಾಫಿ ತೋಟದ ಕೆಲಸಕ್ಕೆ ಕುಟುಂಬದೊಂದಿಗೆ ಬಂದಿದ್ದ ಎಂದು ತಿಳಿದು ಬಂದಿದೆ. ಇದನ್ನೂ ಓದಿ:ಬೆಂಗಳೂರಲ್ಲಿ ಬೀದಿ ನಾಯಿ ಮೇಲೆ ಗ್ಯಾಂಗ್ ರೇಪ್; ನಶೆಯಲ್ಲಿದ್ದ ಕಾಮುಕರಿಂದ ಪೈಶಾಚಿಕ ಕೃತ್ಯ
ಕಳಸ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಬಾಲಕನ ಮೃತದೇಹವನ್ನು ಕಳಸದ ಆಸ್ಪತ್ರೆಗೆ ಸಾಗಿಸಲಾಗಿದೆ. ಆಸ್ಪತ್ರೆಯ ಆವರಣದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇದನ್ನೂ ಓದಿ: ವೈದ್ಯೆ ಕೃತಿಕಾ ಹತ್ಯೆ ಕೇಸ್ – 11 ತಿಂಗಳಿಂದ ಪತ್ನಿ ಹತ್ಯೆಗೆ ಸ್ಕೆಚ್ ಹಾಕಿದ್ದ ಕಿಲ್ಲರ್ ಪತಿ