SSLC ವಿದ್ಯಾರ್ಥಿನಿಗೆ ತನ್ನ ಬೆತ್ತಲೆ ಫೋಟೋ ಕಳಿಸಿ ಕಿರುಕುಳ – ಕಾಮುಕ ಶಿಕ್ಷಕನ ವಿರುದ್ಧ ಕೇಸ್‌

Public TV
1 Min Read
Mobile Video

ಡೆಹ್ರಾಡೂನ್‌: 10ನೇ ತರಗತಿ ವಿದ್ಯಾರ್ಥಿನಿಯೊಬ್ಬರು (SSLC Girl Student) ಶಾಲಾ ಶಿಕ್ಷಕನಿಂದಲೇ ಲೈಂಗಿಕ ಕಿರುಕುಳ ಅನುಭವಿಸುತ್ತಿರುವುದಾಗಿ ದೂರು ದಾಖಲಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ.

ಉತ್ತರಾಖಂಡದ (Uttarakhand) ಹಲ್ದ್ವಾನಿಯಲ್ಲಿ ಘಟನೆ ನಡೆದಿದೆ. ತನ್ನ ಶಾಲೆಯ ಶಿಕ್ಷಕನೇ ತನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾನೆ. ವಾಟ್ಸಪ್‌ ಮತ್ತು ಸ್ನ್ಯಾಪ್‌ಚಾಟ್‌ನಲ್ಲಿ ತನಗೆ ಬೆತ್ತೆಲೆ ಫೋಟೋಗಳನ್ನು ಕಳಿಸಿದ್ದಾನೆ. ಈ ಬಗ್ಗೆ ತನ್ನ ಪೋಷಕರಿಗೆ ತಿಳಿಸಿದ ಬಳಿಕ ಪೊಲೀಸರಿಗೆ (Uttarakhand Police) ದೂರು ನೀಡಲಾಗಿದೆ. ಇದನ್ನೂ ಓದಿ: ಮುಡಾ ಪ್ರಕರಣದಲ್ಲಿ ರಾಯಚೂರು ಸಂಸದ ಜಿ.ಕುಮಾರ ನಾಯಕ್ ಹೆಸರು – ಅಕ್ರಮವಾಗಿ ಭೂಪರಿವರ್ತನೆ ಆರೋಪ

Uttarakhand

ಇನ್ನೂ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಹಲ್ದ್ವಾನಿ ವೃತ್ತ ನಿರೀಕ್ಷಕ ನಿತಿನ್ ಲೋಹಾನಿ ಮಾಹಿತಿ ನೀಡಿದ್ದು, ಹಲ್ದ್ವಾನಿಯ ಖಾಸಗಿ ಶಾಲೆಯೊಂದರ ಶಿಕ್ಷಕನೊಬ್ಬ ಸೋಷಿಯಲ್‌ ಮೀಡಿಯಾದಲ್ಲಿ ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶಗಳನ್ನ ಕಳಿಸಿದ್ದಾನೆ. ಈ ಬಗ್ಗೆ ದೂರು ಸ್ವೀಕರಿಸಿ, ಎಫ್‌ಐಆರ್‌ ದಾಖಲಿಸಿದ್ದು, ತನಿಖೆ ಪ್ರಾರಂಭಿಸಿದ್ದೇವೆ. ಆರೋಪಿಯನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹಮಾಸ್ ಬಂಡುಕೋರರ ದಾಳಿ- ಒತ್ತೆಯಾಳುಗಳ 6 ಶವ ಪತ್ತೆಹಚ್ಚಿ ವಶಪಡಿಸಿಕೊಂಡ ಇಸ್ರೇಲ್

MOBILE

ಘಟನೆ ಬೆಳಕಿಗೆ ಬಂದಿದ್ದು ಹೇಗೆ?
ಇಲ್ಲಿನ ಖಾಸಗಿ ಶಾಲೆಯ ಶಿಕ್ಷಕ, ತನ್ನ ವಿದ್ಯಾರ್ಥಿನಿಗೆ ಆಗಾಗ್ಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ಆಕೆಗೆ ಅನುಚಿತ ಸಂದೇಶಗಳನ್ನ ಕಳಿಸಿದ್ದಾನೆ. ಮೆಸೇಜ್‌ ಜೊತೆಗೆ ಸ್ನ್ಯಾಪ್‌ ಚಾಟ್‌ ಮತ್ತು ವಾಟ್ಸಪ್‌ಗಳಲ್ಲಿ ತನ್ನ ಬೆತ್ತಲೆ ಫೋಟೋಗಳನ್ನ ವಿದ್ಯಾರ್ಥಿನಿಗೆ ಕಳಿಸಿದ್ದಾನೆ. ಇದರಿಂದ ಮಾನಸಿಕ ತೊಂದರೆಗೆ ಒಳಗಾದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ನಂತರ ಪೋಷಕರು ಕೊತ್ವಾಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಮಂದಿರ ಶೈಕ್ಷಣಿಕ ಮೇಳಕ್ಕೆ 2ನೇ ದಿನವೂ ಉತ್ತಮ ಸ್ಪಂದನೆ – ಸಂಜೆ 6 ಗಂಟೆವರೆಗೂ ಇರಲಿದೆ ಮೇಳ

Share This Article