Connect with us

Bengaluru City

ದರ್ಶನ್ ಚಾಲೆಂಜಿಂಗ್ ಸ್ಟಾರ್ ಆಗಿ 16 ವರ್ಷ

Published

on

ಬೆಂಗಳೂರು: ನಟ ದರ್ಶನ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಸಿಕ್ಕಿ ಮೇ 23ಕ್ಕೆ 16 ವರ್ಷವಾಗಿದೆ.

ಮೇ 23 ರಂದು ಚಾಲೆಂಜಿಂಗ್ ಸ್ಟಾರ್ ಬಿರುದು ಸಿಕ್ಕಿ 16 ವರ್ಷ ಆಗಿದಕ್ಕೆ ಹಾಗೂ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರು ಚುನಾವಣೆಯಲ್ಲಿ ಗೆಲುವು ಸಾಧಿಸಿದಕ್ಕೆ ಅಭಿಮಾನಿಗಳು ದರ್ಶನ್ ಅವರ ಮನೆ ಮುಂದೆ ಜಮಾಯಿಸಿದ್ದರು.

2003ರಲ್ಲಿ ದರ್ಶನ್ ಅವರಿಗೆ ಚಾಲೆಂಜಿಂಗ್ ಸ್ಟಾರ್ ಎಂಬ ಬಿರುದು ಸಿಕ್ಕಿದೆ. ಇದಾದ ಬಳಿಕ ತಮ್ಮ ನೆಚ್ಚಿನ ನಟ ದರ್ಶನ್ ಅವರ ಅಭಿಮಾನಿಗಳು, ‘ಡಿ-ಬಾಸ್’, ‘ಬಾಕ್ಸ್ ಆಫೀಸ್ ಸುಲ್ತಾನ್’ ಎಂಬ ಅನೇಕ ಬಿರುದುಗಳನ್ನು ಅವರ ಅಭಿಮಾನಿಗಳು ನೀಡಿದ್ದಾರೆ.

ದರ್ಶನ್ ಅವರು 2001ರಲ್ಲಿ ‘ಮೆಜೆಸ್ಟಿಕ್’ ಚಿತ್ರದ ಮೂಲಕ ಸ್ಯಾಂಡಲ್‍ವುಡ್‍ನಲ್ಲಿ ನಟನಾಗಿ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ದರ್ಶನ್ ಅವರು ‘ಕರಿಯಾ’, ‘ನಮ್ಮ ಪ್ರೀತಿಯ ರಾಮು’ ಹಾಗೂ ‘ಕಲಾಸಿಪಾಳ್ಯ’ ಚಿತ್ರ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.

ದರ್ಶನ್ ಅವರು ಬಹುನಿರೀಕ್ಷಿತ 50ನೇ ಚಿತ್ರ ‘ಮುನಿರತ್ನ ಕುರುಕ್ಷೇತ್ರ’ ವರಮಹಾಲಕ್ಷ್ಮಿ ಹಬ್ಬಕ್ಕೆ ಚಿತ್ರ ರಿಲೀಸ್‍ಗೆ ಸಿದ್ಧವಾಗಿದೆ. ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ವಿಶ್ವಾದ್ಯಂತ ತೆರೆಕಾಣುತ್ತಿದೆ.