ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೊನಾ ಪಾಸಿಟಿವ್ ಕೇಸ್ಗಳ ಸಂಖ್ಯೆ 166 ದಾಖಲಾಗಿದೆ. ಈ ಪೈಕಿ ಬೆಂಗಳೂರು ನಗರ ಒಂದರಲ್ಲೇ 159 ಕೇಸ್ ವರದಿಯಾಗಿದೆ.
ಬೆಂಗಳೂರಿನಲ್ಲಿ 159 ಪಾಸಿಟಿವ್ ಪ್ರಕರಣ ವರದಿಯಾಗಿದೆ. ರಾಜ್ಯದ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ ಇಂದು 2,106ಕ್ಕೆ ತಲುಪಿದೆ. ಬೆಂಗಳೂರು ಹೊರತು ಪಡಿಸಿ ಉಳಿದಂತೆ 3 ಜಿಲ್ಲೆಗಳಲ್ಲಿ 7 ಕೇಸ್ ಮತ್ತು 26 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇಂದು ಯಾವುದೇ ಮರಣ ಪ್ರಕರಣ ದಾಖಲಾಗಿಲ್ಲ. ಇಂದು 101 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದ ಇಂದಿನ ಪಾಸಿಟಿವಿಟಿ ರೇಟ್ ಶೇ. 1.52 ದಾಖಲಾಗಿದ್ದು, ರಾಜ್ಯದಲ್ಲಿ ಈವರೆಗೆ ಒಟ್ಟು 40,064 ಮರಣ ಪ್ರಕರಣ ಪತ್ತೆಯಾಗಿದೆ. ಕೆಲದಿನಗಳಿಂದ ಮರಣ ಪ್ರಕರಣ ಸ್ಥಿರವಾಗಿದೆ. ಇದನ್ನೂ ಓದಿ: UPSC Result: ರಾಜ್ಯದ 27 ಅಭ್ಯರ್ಥಿಗಳು ಸೆಲೆಕ್ಟ್ – ಹೋಟೆಲ್ ಮಾಲೀಕರ ಪುತ್ರ ಅವಿನಾಶ್ ಕರ್ನಾಟಕಕ್ಕೆ ಟಾಪರ್
ಈವರೆಗೆ ರಾಜ್ಯದಲ್ಲಿ ಒಟ್ಟು 39,51,905 ಮಂದಿಗೆ ಕೊರೊನಾ ಬಂದಿದೆ. ಒಟ್ಟು 39,09,693 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಒಟ್ಟು 63,888 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 10,914 ಸ್ಯಾಂಪಲ್ (ಆರ್ಟಿಪಿಸಿಆರ್ 8,234 + 2,640 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಇದನ್ನೂ ಓದಿ: ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಬೀದರ್ನ 7 ಜನ ಮಣ್ಣಲ್ಲಿ ಮಣ್ಣು
ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಬೆಂಗಳೂರು ನಗರ 159, ದಕ್ಷಿಣ ಕನ್ನಡ 4, ಮೈಸೂರು 2 ಮತ್ತು ವಿಜಯಪುರದಲ್ಲಿ 1 ಪ್ರಕರಣ ಸೇರಿ ಒಟ್ಟು 166 ಕೇಸ್ ವರದಿಯಾಗಿದೆ.