ಬೆಂಗಳೂರು: 5 ವರ್ಷಗಳ ಅವಧಿಗೆ ನಗರದ (Bengaluru) ಅಭಿವೃದ್ಧಿಗಾಗಿ 16ನೇ ಹಣಕಾಸು ಆಯೋಗದ (16th Finance Commission) ಮುಂದೆ ರಾಜ್ಯ ಸರ್ಕಾರ 27 ಸಾವಿರ ಕೋಟಿ ರೂ. ಅನುದಾನ ಕೇಳಿದೆ.
ರಾಜ್ಯಕ್ಕೆ ಆಗಮಿಸಿರುವ 16ನೇ ಹಣಕಾಸು ಆಯೋಗದ ಮುಂದೆ ತಮ್ಮ ಬೇಡಿಕೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ (CM Siddaramaiah) ಅವರು, ಬೆಂಗಳೂರಿಗೆ 27 ಸಾವಿರ ಕೋಟಿ ರೂ. ಅನುದಾನ ಕೊಡುವಂತೆ ಮನವಿ ಮಾಡಿದರು. ಬೆಂಗಳೂರಿಗೆ ಮುಂದಿನ 5 ವರ್ಷಗಳಲ್ಲಿ 55,586 ಕೋಟಿ ರೂ. ಅನುದಾನ ಅವಶ್ಯಕತೆ ಇದೆ. ಇದರಲ್ಲಿ 27,799 ಕೋಟಿ ರೂ. ಅನುದಾನ ಕೊಡುವಂತೆ ಹಣಕಾಸು ಆಯೋಗಕ್ಕೆ ಅವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಜೀವನ ಸಂಗಾತಿಯನ್ನು ಪರಿಚಯಿಸಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟ ರಂಜನಿ ರಾಘವನ್
Advertisement
Advertisement
ಕಲ್ಯಾಣ ಕರ್ನಾಟಕದ ಸಮಾನ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 25 ಸಾವಿರ ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಆಯೋಗದಿಂದ 25 ಸಾವಿರ ಕೋಟಿ ರೂ. ಹೊಂದಾಣಿಕೆ ಅನುದಾನ ಬೇಕಿದೆ. ಇದರ ಜೊತೆಗೆ ಪಶ್ಚಿಮ ಘಟ್ಟಗಳ ಅತ್ಯಂತ ದುರ್ಬಲ ಪ್ರದೇಶಗಳಲ್ಲಿ ಪರಿಣಾಮಕಾರಿ ವಿಪತ್ತು ತಗ್ಗಿಸುವಿಕೆ ಮತ್ತು ಸಕಾಲ ಪರಿಹಾರ ಮತ್ತು ಪುನರ್ವಸತಿ ಕ್ರಮಗಳಿಗೆ 10 ಸಾವಿರ ಕೋಟಿ ರೂ. ಅನುದಾನದ ಬೇಡಿಕೆಯನ್ನ ಸಿಎಂ ಹಣಕಾಸು ಆಯೋಗದ ಮುಂದೆ ಇಟ್ಟಿದ್ದಾರೆ. ಇದನ್ನೂ ಓದಿ: ಹಿಂಡಲಗಾ ಜೈಲಿನ ಅತಿ ಭದ್ರತಾ ವಿಭಾಗಕ್ಕೆ ಪ್ರದೂಷ್ ಶಿಫ್ಟ್: ವಿ.ಕೃಷ್ಣಮೂರ್ತಿ