ಮುಂಬೈ: ಮಹಾರಾಷ್ಟ್ರದ (Maharashtra) ಪಾಲ್ಘರ್ ಜಿಲ್ಲೆಯಲ್ಲಿ ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ಕುಸಿದು, 17 ಜನರು ಸಾವನ್ನಪ್ಪಿದ್ದಾರೆ.
ಇಲ್ಲಿಯವರೆಗೆ ಒಂಬತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಇಬ್ಬರು ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ವಸಾಯಿ ವಿರಾರ್ ಮುನ್ಸಿಪಲ್ ಕಾರ್ಪೊರೇಷನ್ ಅಗ್ನಿಶಾಮಕ ಇಲಾಖೆ ಮತ್ತು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆಯ (ಎನ್‌ಡಿಆರ್‌ಎಫ್) ಎರಡು ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.
ವಿರಾರ್ ಪೂರ್ವದಲ್ಲಿರುವ ರಮಾಬಾಯಿ ಅಪಾರ್ಟ್‌ಮೆಂಟ್‌ನ ನಾಲ್ಕು ಅಂತಸ್ತಿನ ಕಟ್ಟಡದ ಹಿಂಭಾಗವು ಕೆಳಗಿನ ಚಾಲ್ ಮೇಲೆ ಕುಸಿದಿದೆ. ಕಳೆದ 36 ಗಂಟೆಗಳಿಂದ ಕಾಲ ನಡೆಯುತ್ತಿದ್ದು, ಮುಂದಿನ ಕೆಲವು ಗಂಟೆಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಇದನ್ನೂ ಓದಿ: Jammu Kashmir | ಅಕ್ರಮವಾಗಿ ಗಡಿ ನುಸುಳಲು ಯತ್ನ – ಇಬ್ಬರು ಉಗ್ರರ ಎನ್‌ಕೌಂಟರ್
ಎನ್‌ಡಿಆರ್‌ಎಫ್‌ನ ಎರಡು ತಂಡಗಳು ಅವಘಡದ ಸ್ಥಳಕ್ಕೆ ಧಾವಿಸಿವೆ ಎಂದು ಎನ್‌ಡಿಆರ್‌ಎಫ್ ಉಪ ಕಮಾಂಡರ್ ಪ್ರಮೋದ್ ಸಿಂಗ್ ಹೇಳಿದ್ದಾರೆ. ಅಗ್ನಿಶಾಮಕ ದಳ ಮತ್ತು ಸ್ಥಳೀಯ ಪೊಲೀಸರು ಸೇರಿದಂತೆ ತುರ್ತು ಸೇವೆಗಳು ಎನ್‌ಡಿಆರ್‌ಎಫ್ ತಂಡಗಳ ಜೊತೆಗೆ ಸಕ್ರಿಯವಾಗಿ ತೊಡಗಿಸಿಕೊಂಡಿವೆ.
ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ದುರಂತಕ್ಕೆ ವಿಷಾದ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬ ಸದಸ್ಯರಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ವಿರಾರ್ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಬಗ್ಗೆ ಮುಖ್ಯಮಂತ್ರಿ ದುಃಖ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2030ರ ಕಾಮನ್‌ವೆಲ್ತ್ ಗೇಮ್ಸ್‌ನ ಹರಾಜು ಪ್ರಕ್ರಿಯೆಗೆ ಕೇಂದ್ರ ಅಸ್ತು
ಗುರುವಾರ ವಸಾಯಿ ವಿರಾರ್ ಪೊಲೀಸರು ಕುಸಿದ ಕಟ್ಟಡದ ಬಿಲ್ಡರ್, ನಿಲೇ ಸಾನೆ ಎಂಬಾತನನ್ನು ಬಂಧಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಸೆಕ್ಷನ್ 105 ರ ಅಡಿಯಲ್ಲಿ ಬಿಲ್ಡರ್ ವಿರುದ್ಧ ಆರೋಪ ಹೊರಿಸಲಾಗಿದೆ.