ರಾಂಚಿ: ಜಾರ್ಖಂಡ್‍ನ ಪಾಕುರ್ ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಮಂದಿ ಸಾವನ್ನಪ್ಪಿದ್ದಾರೆ ಮತ್ತು 26 ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡುವ ಮೂಲಕ ತೀವ್ರ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
Advertisement
ಈ ಘಟನೆ ಬುಧವಾರ ಬೆಳಗ್ಗೆ 8.30ರ ಸುಮಾರಿಗೆ ಗೋವಿಂದಪುರ-ಸಾಹಿಬ್‍ಗಂಜ್ ರಾಜ್ಯ ಹೆದ್ದಾರಿಯಲ್ಲಿ ನಡೆದಿದ್ದು, ಬಸ್‍ನಲ್ಲಿ ಸುಮಾರು 40 ಮಂದಿ ಪ್ರಯಾಣಿಕರು ಸಾಹಿಬ್‍ಗಂಜ್‍ನ ಬರ್ಹರ್ವಾದಿಂದ ದಿಯೋಘರ್ ಜಿಲ್ಲೆಯ ಜಸಿದಿಹ್‍ಗೆ ತೆರಳುತ್ತಿದ್ದರು. ಇದನ್ನೂ ಓದಿ: ಲಾರಿ, ಬಸ್ ಮುಖಾಮುಖಿ ಡಿಕ್ಕಿ- 6 ಮಂದಿ ಸ್ಥಳದಲ್ಲೇ ಸಾವು
Advertisement
ಅಪಘಾತದಲ್ಲಿ ಬಸ್‍ನಲ್ಲಿ ಸಿಲುಕಿದ್ದ ಹಲವಾರನ್ನು ರಕ್ಷಿಸಲಾಗಿದ್ದು, ಅದೃಷ್ಟವಶಾತ್ ಟ್ರಕ್‍ನಲ್ಲಿದ್ದ ಯಾವುದೇ ಸಿಲಿಂಡರ್‌ಗಳು ಸ್ಫೋಟಗೊಂಡಿಲ್ಲ. ಇನ್ನು ದಟ್ಟ ಮಂಜಿನ ವಾತವಾರಣದಿಂದ ಅಪಘಾತ ಸಂಭವಿಸಿರಬಹುದು ಎಂದು ಪೊಲೀಸರು ಹೇಳಿದ್ದಾರೆ.
Advertisement
I am anguished by the bus accident in Pakur, Jharkhand. In this sad hour, condolences to the bereaved families. May the injured recover soon: PM @narendramodi
— PMO India (@PMOIndia) January 5, 2022
Advertisement
ಇದೀಗ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಜಿಲ್ಲಾಡಳಿತ ತಲಾ 1 ಲಕ್ಷ ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ. ಆದರೆ ಗಾಯಗೊಂಡವರ ಸಂಖ್ಯೆ 26 ಆಗಿದೆ. ಅವರಲ್ಲಿ ಕನಿಷ್ಠ ಮೂವರು ಗಂಭೀರವಾಗು ಗಾಯಗೊಂಡಿದ್ದಾರೆ ಎಂದು ಪಾಕುರ್ ಆರ್‍ಡಿ ಪಾಸ್ವಾನ್‍ನ ಸಿವಿಲ್ ಸರ್ಜನ್ ಎಂದಿದ್ದಾರೆ.
An ex-gratia of Rs. 2 lakh each from PMNRF would be given to the next of kin of those who lost their lives in an accident in Pakur. The injured would be given Rs. 50,000: PM @narendramodi
— PMO India (@PMOIndia) January 5, 2022
ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಜಾರ್ಖಂಡ್‍ನ ಪಾಕುರ್‌ನಲ್ಲಿ ಸಂಭವಿಸಿದ ಅಪಘಾತ ಬಹಳ ಬೇಸರ ತರಿಸಿದೆ. ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿಯೇ ಚೇತರಿಸಿಕೊಳ್ಳಲಿ. ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಲಾಗುತ್ತದೆ ಮತ್ತು ಗಾಯಾಳುಗಳಿಗೆ 50,000 ರೂ. ಪರಿಹಾರ ನೀಡಲಾಗುವುದಾಗಿ ತಿಳಿಸಿದ್ದಾರೆ.