Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Crime

ನಾಗ್ಪುರದ ಕಾರ್ಖಾನೆಯಲ್ಲಿ ಭೀಕರ ಸ್ಫೋಟ – 17 ಮಂದಿ ಸಾವು, 18ಕ್ಕೂ ಹೆಚ್ಚು ಜನರಿಗೆ ಗಾಯ

Public TV
Last updated: March 1, 2026 3:58 pm
Public TV
Share
2 Min Read
Nagpur Explosives Manufacturing Company blast
SHARE

ಮುಂಬೈ: ಕಾರ್ಖಾನೆಯೊಂದರಲ್ಲಿ ಭಾರೀ ಸ್ಫೋಟ (Blast) ಸಂಭವಿಸಿದ ಪರಿಣಾಮ 17 ಮಂದಿ ಸಾವನ್ನಪ್ಪಿದ್ದು, 18ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರ (Nagpur) ಜಿಲ್ಲೆಯಲ್ಲಿ ನಡೆದಿದೆ.

ಕಟೋಲ್‌ನ ರೌಲ್‌ಗಾಂವ್‌ನಲ್ಲಿರುವ (Raulgaon) ಗಣಿಗಾರಿಕೆ ಮತ್ತು ಕೈಗಾರಿಕಾ ಸ್ಫೋಟಕ ತಯಾರಿಕಾ ಕಂಪನಿಯಾದ ಎಸ್‌ಬಿಎಲ್ ಎನರ್ಜಿ ಲಿಮಿಟೆಡ್‌ನಲ್ಲಿ ಇಂದು ಬೆಳಗಿನ ಜಾವ ಈ ಭೀಕರ ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆ ಹಾಗೂ ನಾಗ್ಪುರದ ಆರೆಂಜ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಕೊಡಗಿನ ಬೆಟ್ಟತೂರಿನಲ್ಲಿ ಕಾಡಾನೆ ದಾಳಿಗೆ ಪಿಯು ವಿದ್ಯಾರ್ಥಿನಿ ಬಲಿ

ಸ್ಫೋಟಕ್ಕೆ ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ತನಿಖೆ ಆರಂಭಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಭಾನುವಾರ ಮುಂಜಾನೆ 6-7 ಗಂಟೆಯ ನಡುವೆ ದುರಂತ ಸಂಭವಿಸಿದೆ. ಇದನ್ನೂ ಓದಿ: ಖಮೇನಿ ಹತ್ಯೆಗೆ ಆಕ್ರೋಶ – ಕಾಶ್ಮೀರದಲ್ಲಿ ಪ್ರತಿಭಟನೆ, ಪಾಕ್‌ನ ಅಮೆರಿಕ ರಾಯಭಾರ ಕಚೇರಿ ಮೇಲೆ ದಾಳಿ

ರಾಲ್‌ಗಾಂವ್‌ನಲ್ಲಿರುವ ಎಸ್‌ಬಿಎಲ್ ಕಂಪನಿಯು ಗಣಿಗಾರಿಕೆಯಲ್ಲಿ ಬಳಸುವ ಡಿಟೋನೇಟರ್‌ಗಳು ಮತ್ತು ಇತರ ಸ್ಫೋಟಕ ವಸ್ತುಗಳನ್ನು ತಯಾರಿಸುತ್ತದೆ. ಕಾರ್ಮಿಕರು ಎಂದಿನಂತೆ ಕೆಲಸ ಮಾಡುತ್ತಿದ್ದ ವೇಳೆ ಹಠಾತ್ ಸ್ಫೋಟ ಸಂಭವಿಸಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಸ್ರೇಲ್‌-ಅಮೆರಿಕ ಆರ್ಭಟಕ್ಕೆ ಖಮೇನಿ ಗ್ಯಾಂಗ್ ಖಲ್ಲಾಸ್ – ಇರಾನ್‌ನ ಟಾಪ್‌ ಕಮಾಂಡರ್‌ಗಳೇ ಉಡೀಸ್‌

ಸ್ಫೋಟದ ಶಬ್ದವು ಸುತ್ತಮುತ್ತಲಿನ ಪ್ರದೇಶಗಳಿಗೆ ಕೇಳಿಸಿದ್ದು, ಗ್ರಾಮಸ್ಥರಲ್ಲಿ ಭೀತಿ ಉಂಟುಮಾಡಿತು. ಸ್ಫೋಟದ ತೀವ್ರತೆಗೆ ಕಾರ್ಖಾನೆಯ ಒಂದು ಭಾಗ ಕುಸಿದು ಬಿದ್ದಿದೆ. ಅಲ್ಲದೇ ಆಕಾಶದೆತ್ತರಕ್ಕೆ ದಟ್ಟವಾದ ಹೊಗೆ ಆವರಿಸಿಕೊಂಡಿತ್ತು. ಸ್ಫೋಟದ ಸಮಯದಲ್ಲಿ, ಸುಮಾರು 25 ರಿಂದ 30 ಕಾರ್ಮಿಕರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಇನ್ನೂ ಹಲವು ಕಾರ್ಮಿಕರು ಕಾರ್ಖಾನೆಯೊಳಗೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿದ ತಕ್ಷಣ, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ತುರ್ತು ಸೇವೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದನ್ನೂ ಓದಿ: ಪೊಲೀಸ್ ಮ್ಯಾರಥಾನ್ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ದುರಂತದ ಕುರಿತು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬೇಸರ ವ್ಯಕ್ತಪಡಿಸಿದ್ದಾರೆ. ನಾಗ್ಪುರ ಜಿಲ್ಲೆಯ ರೌಲ್‌ಗಾಂವ್‌ನಲ್ಲಿರುವ ಕಾರ್ಖಾನೆಯಲ್ಲಿ ಸಂಭವಿಸಿದ ಘಟನೆ ಅತ್ಯಂತ ದುರದೃಷ್ಟಕರ ಮತ್ತು ದುರಂತ. ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ತಕ್ಷಣ ಘಟನಾ ಸ್ಥಳಕ್ಕೆ ತಲುಪಿದ್ದಾರೆ. ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸಹ ಸ್ಥಳದಲ್ಲಿವೆ. ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದ್ದು, ಇಲ್ಲಿಯವರೆಗೆ 17 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮೃತರಿಗೆ ನಾನು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ಕುಟುಂಬಗಳ ದುಃಖದಲ್ಲಿ ನಾವು ಭಾಗಿಯಾಗಿದ್ದೇವೆ ಎಂದು ಫಡ್ನವೀಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಪವಾಡವೇ ನಡೆದಿತ್ತು… ಬಾಂಬ್‌ ದಾಳಿಯಲ್ಲೂ ಬದುಕುಳಿದಿದ್ದ ಖಮೇನಿ – ಜೀವನದ ಪ್ರಮುಖ ಘಟ್ಟಗಳು ಹೇಗಿತ್ತು?

ಇನ್ನು ಪ್ರಧಾನ ಮಂತ್ರಿ ಕಚೇರಿ ದುರಂತದ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಆರ್ಥಿಕ ನೆರವು ಘೋಷಿಸಿದೆ. ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಆರ್ಥಿಕ ನೆರವನ್ನು ಘೋಷಿಸಿದೆ. ಇದನ್ನೂ ಓದಿ: ಗಲ್ಫ್ ರಾಷ್ಟ್ರಗಳ ಮೇಲೆ ಸಮರ ಸಾರಿದ ಇರಾನ್‌ – ಯುಎಇ ಮೇಲೆ 208 ಡ್ರೋನ್‌, 137 ಬ್ಯಾಲಿಸ್ಟಿಕ್‌ ಕ್ಷಿಪಣಿ ದಾಳಿ

TAGGED:blastFactorymaharashtranagpurಕಾರ್ಖಾನೆ ಸ್ಫೋಟನಾಗ್ಪುರಮಹಾರಾಷ್ಟ್ರರೌಲ್‌ಗಾಂವ್
Share This Article
Facebook Whatsapp Whatsapp Telegram

Cinema news

Asha Bhosle 2
10ನೇ ವಯಸ್ಸಿನಲ್ಲಿ ಶುರುವಾದ ಗಾಯನದ ಬದುಕು – `ಸ್ವರʼ ನಿಲ್ಲಿಸಿದ ಆಶಾ ಭೋಸ್ಲೆ
Cinema Latest Main Post National
Actor Harish
ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ – ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು
Cinema Crime Karnataka Kodagu Latest Sandalwood Top Stories
Asha Bhosle and Narendra Modi
ಭಾರತದ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದವರು ಆಶಾ ಭೋಸ್ಲೆ: ಮೋದಿ ಕಂಬನಿ
Bollywood Cinema Latest Main Post National
Asha Bhosle
ಹೃದಯ ಸ್ತಂಭನದಿಂದ ಖ್ಯಾತ ಗಾಯಕಿ ಆಶಾ ಭೋಸ್ಲೆ ನಿಧನ
Bollywood Cinema Latest Main Post National

You Might Also Like

Donald Trump 1
Latest

ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

Public TV
By Public TV
33 minutes ago
MALLIKARJUN KHARGE NARENSRA MODI
Latest

33% ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ ಕೋರಿದ ಮೋದಿ – ಸರ್ವಪಕ್ಷ ಸಭೆಗೆ ಖರ್ಗೆ ಆಗ್ರಹ

Public TV
By Public TV
37 minutes ago
02 11
Latest

ಬಿಗ್‌ ಬುಲೆಟಿನ್‌ 12 April 2026 ಭಾಗ-2

Public TV
By Public TV
47 minutes ago
Rahul Gandhi 3
Latest

ಸಮಾನತೆ ಇರಬಾರದು ಅನ್ನೋ ಕಾರಣಕ್ಕೆ ಸಂವಿಧಾನ ಮುಗಿಸುವುದು RSS, ಬಿಜೆಪಿಯ ಮುಖ್ಯ ಉದ್ದೇಶ: ರಾಗಾ ಕಿಡಿ

Public TV
By Public TV
48 minutes ago
Virat Kohli IPL 2026
Cricket

ಹೆಲ್ಮೆಟ್‌, ಗ್ಲೌಸ್‌ ಎಸೆದು ಕೊಹ್ಲಿ ಆಕ್ರೋಶ

Public TV
By Public TV
49 minutes ago
siddaramaiah 2
Bengaluru City

ಸಚಿವ ಸ್ಥಾನದ ಆಕಾಂಕ್ಷಿ ಶಾಸಕರು ದೆಹಲಿಗೆ ಭೇಟಿ ನೀಡೋದ್ರಲ್ಲಿ ತಪ್ಪಿಲ್ಲ: ಸಿದ್ದರಾಮಯ್ಯ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?