ಐಜ್ವಾಲ್: ನಿರ್ಮಾಣ ಹಂತದಲ್ಲಿದ್ದ ರೈಲ್ವೆ ಸೇತುವೆ ಕುಸಿದು (Railway Bridge Collapse) ಬಿದ್ದ ಪರಿಣಾಮ 17 ಮಂದಿ ದುರ್ಮರಣಹೊಂದಿರುವ ಘಟನೆ ಮಿಜೋರಾಂನಲ್ಲಿ (Mizoram) ನಡೆದಿದೆ.
ಮಿಜೋರಾಂನ ಐಜ್ವಾಲ್‌ನಿಂದ (Aizawl) ಸುಮಾರು 21 ಕಿ.ಮೀ ದೂರದಲ್ಲಿರುವ ಸಾಯಿರಾಂಗ್ (Sairang) ಪ್ರದೇಶದಲ್ಲಿ ಈ ದುರ್ಘಟನೆ ವರದಿಯಾಗಿದೆ. ಇನ್ನೂ ಹಲವರು ಸ್ಥಳದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಅವರನ್ನು ರಕ್ಷಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಸೇತುವೆ ಕುಸಿದ ಸಂದರ್ಭದಲ್ಲಿ ಸುಮಾರು 35-40 ಕಟ್ಟಡ ಕಾರ್ಮಿಕರು ಸ್ಥಳದಲ್ಲಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Under construction railway over bridge at Sairang, near Aizawl collapsed today; atleast 17 workers died: Rescue under progress.
Deeply saddened and affected by this tragedy. I extend my deepest condolences to all the bereaved families and wishing a speedy recovery to the… pic.twitter.com/IbmjtHSPT7
— Zoramthanga (@ZoramthangaCM) August 23, 2023
Advertisement
ಘಟನೆಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?
Advertisement
Advertisement
ಘಟನೆ ನಡೆದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮಿಜೋರಾಂ ಮುಖ್ಯಮಂತ್ರಿ ಝೋರಂತಂಗ ತಿಳಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಐಜ್ವಾಲ್ ಬಳಿಯ ಸಾಯಿರಾಂಗ್‌ನಲ್ಲಿ ನಿರ್ಮಾಣ ಹಂತದ ರೈಲ್ವೆ ಮೇಲ್ಸೇತುವೆ ಇಂದು ಕುಸಿದಿದೆ. ಕನಿಷ್ಠ 17 ಕಾರ್ಮಿಕರ ಸಾವಾಗಿದ್ದು, ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ. ಈ ದುರಂತದಿಂದ ತೀವ್ರ ದುಃಖವಾಗಿದೆ. ನಾನು ಎಲ್ಲಾ ಮೃತರ ಕುಟುಂಬಗಳಿಗೆ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಬಂದ ಜನರಿಗೆ ಕೃತಜ್ಞತೆಯನ್ನು ತಿಳಿಸುತ್ತೇನೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಯೋಗಿ ಅವರ ಕಾಲು ಮುಟ್ಟಿ ರಜನಿ ನಮಸ್ಕರಿಸಿದ್ದು ತಪ್ಪೇನೂ ಇಲ್ಲ: ಅಣ್ಣಾಮಲೈ
Web Stories