ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಬಲೂಚಿಸ್ತಾನ್ (Balochistan) ಪ್ರಾಂತ್ಯದಲ್ಲಿ ಸಂಭವಿಸಿದ ಅಪಘಾತವೊಂದರಲ್ಲಿ (Accident) 17 ಯಾತ್ರಾರ್ಥಿಗಳು ಸಾವಿಗೀಡಾಗಿದ್ದು, 41 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಟ್ರಕ್ ಮಿತಿಮೀರಿದ ವೇಗದಲ್ಲಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ ಈ ಅವಘಡ ಸಂಭವಿಸಿದೆ. ಯಾತ್ರಾರ್ಥಿಗಳು ಈದ್ ಅಲ್-ಫಿತರ್ (Eid al-Fitr) ರಜೆಯ ಹಿನ್ನೆಲೆಯಲ್ಲಿ ನೈರುತ್ಯ ಪಾಕಿಸ್ತಾನದಲ್ಲಿರುವ ಧಾರ್ಮಿಕ ಕೇಂದ್ರವೊಂದಕ್ಕೆ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಚಾಲಕ ಟ್ರಕ್‍ನಿಂದ ಜಿಗಿದಿದ್ದು, ಸುರಕ್ಷಿತವಾಗಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜೋತಿಷ್ಯ ಪ್ರಭಾವ – ಸಂಗಾತಿ, ಮಕ್ಕಳನ್ನ ಕೊಂದು ತಾನೂ ಭೀಕರವಾಗಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ!
Advertisement
ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, 17 ಜನರ ಮೃತದೇಹಗಳನ್ನು ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Advertisement
Advertisement
ಪಾಕಿಸ್ತಾನದಲ್ಲಿ ರಸ್ತೆ ಸುರಕ್ಷತಾ ಕ್ರಮಗಳು ಸಡಿಲವಾಗಿದ್ದು, ಚಾಲಕ ತರಬೇತಿಯು ಕಳಪೆಯಾಗಿದೆ. ಇದರೊಂದಿಗೆ ಸಾರಿಗೆ ಮೂಲಸೌಕರ್ಯವು ಕ್ಷೀಣಿಸುತ್ತಿದೆ. ಇದರಿಂದ ರಸ್ತೆ ಅಪಘಾತಗಳು ಪಾಕ್‍ನಲ್ಲಿ ಸಾಮಾನ್ಯವಾಗಿದೆ.
Advertisement
ಜನವರಿ 2023 ರಲ್ಲಿ, ತೈಲದ ಕಂಟೇನರ್‍ಗಳನ್ನು ತುಂಬಿದ ಟ್ರಕ್ ಹಾಗೂ ಬಸ್ ಬಲೂಚಿಸ್ತಾನ್ ಪ್ರಾಂತ್ಯದ ಕಂದಕಕ್ಕೆ ಉರುಳಿ ಸಂಭವಿಸಿದ್ದ ಅಪಘಾತದಲ್ಲಿ 41 ಜನ ಸಾವಿಗೀಡಾಗಿದ್ದರು. ಇದನ್ನೂ ಓದಿ: ಯುದ್ಧಕ್ಕೆ ಸಿದ್ಧರಾಗುವ ಸಮಯ ಬಂದಿದೆ: ಕಿಮ್ ಜಾಂಗ್ ಉನ್