ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ ಬದಲು ಬ್ಯಾಲೆಟ್ ಪೇಪರ್ ನಲ್ಲೇ ಚುನಾವಣೆ ನಡೆಸುವಂತೆ 17 ಪಕ್ಷಗಳು ಕೇಂದ್ರ ಚುನಾವಣೆ ಆಯೋಗದ (ಇಸಿಐ) ಮೊರೆ ಹೋಗುವ ಸಾಧ್ಯತೆ ಇದೆ.
ಮುಂದಿನ ವಾರ ಈ ಕುರಿತು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಲು ಹಲವು ರಾಜಕೀಯ ಪಕ್ಷಗಳು ಸಮಯ ನಿಗದಿ ಪಡಿಸಿವೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.
Advertisement
ಇವಿಎಂ ಯಂತ್ರಗಳನ್ನ ಸುಲಭವಾಗಿ ಟ್ಯಾಂಪರಿಂಗ್ ಮಾಡಲು ಸಾಧ್ಯ ಎಂಬ ವಾದ ಮಂಡಿಸಲಿರುವ ಪಕ್ಷಗಳು, ಬ್ಯಾಲೆಟ್ ಪೇಪರ್ ಮೂಲಕವೇ ಚುನಾವಣೆ ನಡೆಸಲು ಮನವಿ ಸಲ್ಲಿಸಲಿದೆ. ಈಗಾಗಲೇ ಹಲವು ಪಕ್ಷಗಳ ಮುಖಂಡರು ಈ ಕುರಿತು ಆಡಳಿತರೂಢ ಕೇಂದ್ರ ಸರ್ಕಾರದ ವಿರುದ್ಧವೂ ಆರೋಪಗಳನ್ನು ಮಾಡಿದ್ದಾರೆ.
Advertisement
Advertisement
ಪ್ರಮುಖವಾಗಿ ಆಂಧ್ರಪ್ರದೇಶ ಸಿಎಂ ಚಂದ್ರಬಾಬು ನಾಯ್ಡು ಈ ಕುರಿತು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದು, ತಮ್ಮ ಪಕ್ಷದ ನಾಯಕರು ಇವಿಎಂ ಯಂತ್ರಗಳ ಬಗ್ಗೆ ಎಚ್ಚರಿಕೆ ವಹಿಸಬೇಕು. ಕೇಂದ್ರ ಸರ್ಕಾರ ಕೇಂದ್ರ ಚುನಾವಣಾ ಆಯೋಗದ ಮೇಲೂ ತನ್ನ ಪ್ರಭಾವನ್ನು ಉಂಟು ಮಾಡಿದೆ ಎಂದು ಆರೋಪಿದ್ದರು.
Advertisement
ಉತ್ತರ ಪ್ರದೇಶ ಉಪ ಚುನಾವಣೆಯ ಸಂದರ್ಭದಲ್ಲಿ ಕೆಲ ಮತಯಂತ್ರಗಳಲ್ಲಿ ದೋಷ ಕಂಡು ಬಂದಾಗ ಸಮಾಜವಾದಿ ಪಕ್ಷ ನಾಯಕ ಅಖಿಲೇಶ್ ಯಾದವ್, ಇವಿಎಂ ಯಂತ್ರಗಳ ಮೇಲಿನ ನಂಬಿಕೆಯನ್ನು ಜನರು ಕಳೆದುಕೊಂಡಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡಲು ಮನವಿ ಮಾಡುವುದಾಗಿ ತಿಳಿಸಿದ್ದರು.
ಮಹಾರಾಷ್ಟ್ರ ಸರ್ಕಾರದಲ್ಲಿ ಬಿಜೆಪಿಯ ಮಿತ್ರ ಪಕ್ಷವಾಗಿರುವ ಶಿವಸೇನೆ, ಈ ಕುರಿತು ಹಲವು ಅನುಮಾನಗಳನ್ನು ವ್ಯಕ್ತಪಡಿಸಿದ್ದು, ಅವುಗಳ ನಿವಾರಣೆಗಾಗಿ ಬ್ಯಾಲೆಟ್ ಪೇಪರ್ ಬಳಕೆ ಮಾಡಿ ಎಂದು ಸಲಹೆ ನೀಡಿತ್ತು.
ವಿರೋಧಿ ಪಕ್ಷಗಳ ಆರೋಪಗಳನ್ನು ಅಲ್ಲಗೆಳೆದಿದ್ದ ಕೇಂದ್ರ ಚುನಾವಣಾ ಆಯೋಗ ಇವಿಎಂ ಯಂತ್ರಗಳಲ್ಲಿ ಮತ್ತಷ್ಟು ಸುಧಾರಣೆ ತರಲು ವಿವಿ ಪ್ಯಾಟ್ ಬಳಕೆ ಸಹ ಮಾಡಿತ್ತು. ಆದರು ಸದ್ಯ ಹಲವು ರಾಜಕೀಯ ಪಕ್ಷಗಳು ಕೇಂದ್ರ ಚುನಾವಣಾ ಆಯೋಗದಲ್ಲಿ ಮನವಿ ಮಾಡಲು ಸಿದ್ಧತೆ ನಡೆಸಿವೆ.