ನವದೆಹಲಿ: ಜೆಇಇ ಪರೀಕ್ಷೆ ಪಾಸಾಗದ್ದಕ್ಕೆ ವಿದ್ಯಾರ್ಥಿನಿ 7ನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.
ಮೃತ ವಿದ್ಯಾರ್ಥಿನಿ ದೆಹಲಿಯ ಜಾಮಿಯಾ ನಗರದಲ್ಲಿ ವಾಸಿಸುತ್ತಿದ್ದು, ಪೊಲೀಸರು ಗುರುತನ್ನು ಬಹಿರಂಗಪಡಿಸಿಲ್ಲ. ಜಾರ್ಖಂಡ್ ಮೂಲದವಳು ಎಂದು ತಿಳಿದುಬಂದಿದೆ. ದೆಹಲಿಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ (Indian Institute Of Technology) 2ನೇ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ಓದುತ್ತಿದ್ದಳು. ಮಂಗಳವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮೂರು ದಿನಗಳ ಬಳಿಕ ಬೆಳಕಿಗೆ ಬಂದಿದೆ.ಇದನ್ನೂ ಓದಿ: ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ, ಹಣ ಇರುವ ಬ್ಯಾಗ್ ಹಿಂತಿರುಗಿಸಿ ಮಾನವೀಯತೆ ಮೆರೆದ ನಿರ್ವಾಹಕಿ
ಪೊಲೀಸರ ಮಾಹಿತಿ ಪ್ರಕಾರ, ಉನ್ನತ ಎಂಜಿನಿಯರಿಂಗ್ ಕಾಲೇಜುಗಳಿಗೆ ಪ್ರವೇಶಕ್ಕಾಗಿ ರಾಷ್ಟ್ರೀಯ ಪ್ರವೇಶ ಪರೀಕ್ಷೆಯಲ್ಲಿ (JEE) ಪಾಸಾಗಲು ಸಾಧ್ಯವಾಗದೇ ಇದ್ದಿದ್ದಕ್ಕಾಗಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಜೊತೆಗೆ ಡೆತ್‌ನೋಟ್ ಬರೆದಿಟ್ಟಿದ್ದು, ತನ್ನನ್ನು ಕ್ಷಮಿಸುವಂತೆ ಪೋಷಕರಲ್ಲಿ ಕೇಳಿಕೊಂಡಿದ್ದಾಳೆ. ನನ್ನನ್ನು ಕ್ಷಮಿಸಿ, ನನ್ನಿಂದ ಪರೀಕ್ಷೆಯಲ್ಲಿ ಉತ್ತೀರ್ಣಗೊಳ್ಳಲು ಸಾಧ್ಯವಾಗಲಿಲ್ಲ. ಅಧ್ಯಯನದ ಒತ್ತಡ ಹಾಗೂ ಅಂದುಕೊಂಡ ರೀತಿಯಲ್ಲಿ ಓದಲು ಸಾಧ್ಯವಾಗಲಿಲ್ಲ ಎಂದು ಬರೆದಿದ್ದಾಳೆ.
ಪೊಲೀಸರು ಇದನ್ನು ಆತ್ಮಹತ್ಯೆ ಎಂದು ತಿಳಿಸಿದ್ದು, ವಿದ್ಯಾರ್ಥಿಯ ಕೋರ್ಸ್ ಗೈಡ್ ಮೇಲೆ ಕ್ರಮ ಕೈಗೊಳ್ಳುವಂತೆ ಪೋಷಕರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಗಂಡನಿಗೆ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ಕೊಡ್ತಿದ್ದ ಖತರ್ನಾಕ್ ಸುಂದರಿ – ಸ್ಲೋ ಪಾಯ್ಸನ್ ಯಾವುದು?