ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ಷೇಪಾರ್ಹ ಫೋಟೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಆರೋಪದಡಿ 17 ವರ್ಷದ ಹುಡುಗನನ್ನು ಪೊಲೀಸರು ಬಂಧಿಸಿದ್ದಾರೆ.
ಹುಡುಗ ಸಹಸ್ವಾನ್ ಪ್ರದೇಶದ ಸಿಲ್ಹರಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದ್ದು, ಆತನನ್ನು ಬಾಲಾಪರಾಧ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ಅಲ್ಲಿಂದ ಬಾಲಾಪರಾಧಿಗೃಹಕ್ಕೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ರಜನಿಕಾಂತ್ ಪುತ್ರಿಗೆ ಡಿವೋರ್ಸ್ ನೀಡಿದ ಧನುಷ್
ಸಿಎಂ ಅವರ ಆಕ್ಷೇಪಾರ್ಹ ಭಾವಚಿತ್ರವನ್ನು ಪೋಸ್ಟ್ ಮಾಡಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ ಎಂದು ಸಾಹಸವನ್ ಎಸ್‍ಎಚ್‍ಒ ಸಂಜೀವ್ ಶುಕ್ಲಾ ತಿಳಿಸಿದ್ದಾರೆ. ಈ ಸಂಬಂಧ ಸಬ್ ಇನ್ಸ್‌ಪೆಕ್ಟರ್ ರಾಜೇಶ್ ಕುಮಾರ್ ಎಫ್‍ಐಆರ್ ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್ 500 (ಮಾನನಷ್ಟ) ಮತ್ತು ಐಟಿ ಕಾಯ್ದೆ ಸೆಕ್ಷನ್ 67ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೆಟ್ಟದಾಗಿ ಮುಟ್ಟಿದ್ದಕ್ಕಾಗಿ ಛೀಮಾರಿ ಹಾಕಿದ ಮಹಿಳೆಯನ್ನೇ ಕೊಲ್ಲಲು ಮುಂದಾದ ವ್ಯಕ್ತಿ ಅರೆಸ್ಟ್