ಮುಂಬೈ: 17 ವರ್ಷದ ಹುಡುಗಿಯ ಮೇಲೆ ಅಪ್ರಾಪ್ತ ಹುಡುಗರಿಬ್ಬರು ಸಾಮೂಹಿಕವಾಗಿ ಅತ್ಯಾಚಾರ ಎಸಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಈ ಘಟನೆ ಮಹಾರಾಷ್ಟ್ರದ ಮೊಖದಾ ತಾಲೂಕು ಗ್ರಾಮದ ಬಳಿ ಶುಕ್ರವಾರ ನಡೆದಿದೆ. ಆರೋಪಿಗಳಿಬ್ಬರಿಗೂ 17 ವರ್ಷ ವಯಸ್ಸು ಎಂದು ತಿಳಿದು ಬಂದಿದೆ. ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಏನಿದು ಪ್ರಕರಣ?
ಶುಕ್ರವಾರ ಸಂತ್ರಸ್ತೆ ಬ್ಯಾಂಕಿಗೆ ಹೋಗಿ ಮನೆಗೆ ಹಿಂದಿರುಗುತ್ತಿದ್ದಳು. ಈ ವೇಳೆ ಇಬ್ಬರು ಹುಡುಗರು ಮೋಟಾರ್ ಸೈಕಲ್ ನಲ್ಲಿ ಬಂದು ಹುಡುಗಿಯನ್ನು ನಿಲ್ಲಿಸಿ ಎಲ್ಲಿಗೆ ಹೋಗುತ್ತಿದ್ದೀಯಾ ಎಂದು ಕೇಳಿದ್ದಾರೆ. ಬಳಿಕ ಆಕೆಯನ್ನು ಸಮೀಪದ ಪೊದೆಯೊಳಗೆ ಎಳೆದುಕೊಂಡು ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಜವಹಾರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ರಾಕೇಶ್ ಪಗರೆ ತಿಳಿಸಿದ್ದಾರೆ.
ಸಂತ್ರಸ್ತೆ ನಡೆದ ಘಟನೆಯ ಬಗ್ಗೆ ಪೋಷಕರಿಗೆ ಹೇಳಿದ್ದಾಳೆ. ನಂತರ ಅವರು ಪೊಲೀಸ್ ಠಾಣೆಗೆ ಬಂದು ದೂರು ದಾಖಲಿಸಿದ್ದಾರೆ. ಸದ್ಯಕ್ಕೆ ಆರೋಪಿಗಳನ್ನು ಶುಕ್ರವಾರ ಸಂಜೆ ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ ಮತ್ತು ಪೋಕ್ಸೋ ಕಾಯ್ಡೆಯಡಿಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv